ಸಾಂಬ್ರಾ ಗ್ರಾಮದ ಮಾರುತಿ ಗಲ್ಲಿಯಲ್ಲಿ ನೂತನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಟಾಪನೆಯ ಕಾಂಕ್ರೀಟ್ (ಸ್ಲ್ಯಾಬ್ ಭರಣಿ) ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಪೂಜೆ ನೆರವೇರಿಸಿದರು.
ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಈ ಕೆಲಸವನ್ನು ಕೈಗೆತ್ತಿಕೊಳ್ಳಲಾಗಿದ್ದು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲ ಮಹನೀಯರ ತ್ಯಾಗ, ಬಲಿದಾನಗಳನ್ನು ಗೌರವಿಸುವ ದೃಷ್ಟಿಯಿಂದ ಈ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ಚನ್ನರಾಜ ಹಟ್ಟಿಹೊಳಿ ತಿಳಿಸಿದರು.
ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ಹಲವಾರು ವಿದಾಯಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಜನರ ಸಹಕಾರ ಇದೇ ರೀತಿ ಇರಲಿ ಎಂದು ಅವರು ಕೋರಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ನಾಗೇಶ ದೇಸಾಯಿ, ಈರಪ್ಪ ಸುಳೇಭಾವಿ, ಸದು ಪಾಟೀಲ, ಲಕ್ಷ್ಮಣ ಕೊಳ್ಳಪ್ಪಗೋಳ, ಮಹೇಶ ಕುಲಕರ್ಣಿ, ರಂಜನಾ ಅಪ್ಪಯಾಚೆ, ಸಂತೋಷ ದೇಸಾಯಿ, ಗ್ರಾಮ ಪಂಚಾಯತಿಯ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


