ಹಿರಿಯೂರು: ಕೆಂಪೇಗೌಡ ಜಯಂತಿ ಅಂಗವಾಗಿ ನಡೆಸಲಾದ ಮೆರವಣಿಗೆಯಲ್ಲಿ ನಿಯಮ ಉಲ್ಲಂಘಿಸಿ ಅಧಿಕ ಶಬ್ಧದ ಡಿ.ಜೆ. ಬಳಸಲಾಗಿರುವ ಬಗ್ಗೆ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಡಿಸೆಬಲ್ ಮಿತಿ ಮೀರಿ ಡಿ.ಜೆ.ಬಳಕೆ ಮಾಡಲಾಗಿದ್ದು, ಈ ಮೂಲಕ ಸರ್ಕಾರದ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಒಕ್ಕಲಿಗ ಸಂಘದ ತಾಲ್ಲೂಕು ಅಧ್ಯಕ್ಷರಾದ ರಾಮಚಂದ್ರಪ್ಪ ಹಾಗೂ ಡಿ ಜೆ ಮಾಲೀಕರ ಮೇಲೆ ಹಿರಿಯೂರು ನಗರ ಪೋಲಿಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಆಗಸ್ಟ್ 18ರಂದು ಶ್ರೀ ಕೆಂಪೇಗೌಡ ಜಯಂತಿ ಅಂಗವಾಗಿ ಪ್ರಧಾನ ರಸ್ತೆಯಲ್ಲಿರುವ ರಂಜಿತ್ ಹೋಟೆಲ್ ಬಳಿಯಿಂದ ಡಿ.ಜೆ. ಬಳಕೆ ಮಾಡಿ ಮೆರವಣಿಗೆ ಮಾಡಲಾಗಿತ್ತು.
ವರದಿ: ಮುರುಳಿಧರನ್ ಆರ್ ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz