ಬಳ್ಳಾರಿ: ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬಂಡಿಹಟ್ಟಿಯಲ್ಲಿ ನಡೆದಿದೆ. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪಂಪಾಪತಿ ಹಾಗೂ ಅವರ ಪತ್ನಿ ದ್ಯಾವಮ್ಮ ಮೃತ ದುರ್ದೈವಿಗಳಾಗಿದ್ದಾರೆ.
ಮನೆಯ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ದ್ಯಾವಮ್ಮಗೆ ತಗುಲಿತ್ತು, ಈ ವೇಳೆ ಪತ್ನಿಯನ್ನ ಬಿಡಿಸಲು ಹೋದ ಪತಿ ಕೂಡ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


