ತುಮಕೂರು : ಪದೇ ಪದೇ ಚಡ್ಡಿಯಲ್ಲಿ ಬಾಲಕನೊಬ್ಬ ಮೂತ್ರ ಮಾಡಿಕೊಳ್ಳುತ್ತಿದ್ದ ಅನ್ನುವ ಕಾರಣಕ್ಕೆ ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಸೇರಿ ಬಾಲಕನ ಗುಪ್ತಾಂಗವನ್ನು ಬೆಂಕಿಕಡ್ಡಿಯಿಂದ ಸುಟ್ಟಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.
ಮೂರುವರೆ ವರ್ಷದ ಬಾಲಕ ಪದೇ ಪದೇ ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದ. ಹೀಗಾಗಿ ವಿದ್ಯಾರ್ಥಿಯನ್ನು ಗದರಿಸಲು ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಸೇರಿ ಬಾಲಕನ ಗುಪ್ತಾಂಗವನ್ನು ಬೆಂಕಿ ಕಡ್ಡಿಯಿಂದ ಸುಟ್ಟಿದ್ದಾರೆ. ಬಾಲಕನ ಗುಪ್ತಾಂಗ ಮತ್ತು ತೊಡೆಯ ಬಳಿ ಸುಟ್ಟ ಗಾಯಗಳಾಗಿವೆ.
ಈ ಬಗ್ಗೆ ಸುದ್ದಿ ತಿಳಿದ ಜಿಲ್ಲಾ ಮಕ್ಕಳ ಹಕ್ಕು ರಕ್ಷಣಾ ಘಟಕದ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿ ಅಂಗನವಾಡಿ ಕೇಂದ್ರದ ಶಿಕ್ಷಕಿ ಹಾಗೂ ಸಹಾಯಕಿಗೆ ನೋಟಿಸ್ ನೀಡಿ ತಪ್ಪೋಪ್ಪಿಗೆ ಪತ್ರ ಪಡೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy