ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಫ್ರಾನ್ಸ್ನ ಬರ್ನಾರ್ಡ್ ಅರ್ನಾಲ್ಟ್ ಅವರನ್ನು ಹಿಂದಿಕ್ಕಿ ವಿಶ್ವದ ನಂ. 3 ಶ್ರೀಮಂತನಾಗಿ ಕಾಣಿಸಿಕೊಂಡಿದ್ದಾರೆ.
ಬ್ಲೂಮಬರ್ಗ ಬಿಲಿಯನೇರ್ಸ್ ಇಂಡೆಕ್ಸ್ ಶ್ರೇಯಾಂಕದಲ್ಲಿ ಗೌತಮ್ ಅದಾನಿ ಈಗ ಎಲೋನ್ ಮಸ್ಕ್ ಮತ್ತು ಜೆಫ್ ಬೆಜೋಸ್ ಅವರನ್ನು ಹಿಂದಿಕ್ಕಿದ್ದಾರೆ.
ಒಟ್ಟು 137.4 ಶತಕೋಟಿ ಡಾಲರ್ ನಿವ್ವಳ ಆಸ್ತಿ ಹೊಂದಿರುವ 60 ವರ್ಷದ ಅದಾನಿ, ಲೂಯಿಸ್ ವಿಟಾನ್ ಅಧ್ಯಕ್ಷ ಅರ್ನಾಲ್ಟ್ ಅವರ ಸಂಪತ್ತನ್ನು ಹಿಂದಿಕ್ಕಿದ್ದಾರೆ ಎನ್ನಲಾಗಿದೆ.
ಇದೇ ಮೊದಲ ಬಾರಿಗೆ ಏಷ್ಯಾದ ವ್ಯಕ್ತಿಯೊಬ್ಬರು ಈ ಪಟ್ಟಿಯಲ್ಲಿ ಅಗ್ರ ಮೂರು ಸ್ಥಾನಗಳಿಗೆ ಪ್ರವೇಶಿಸಿದ್ದಾರೆ, ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಮತ್ತು ಚೀನಾದ ಜಾಕ್ ಮಾ ಕೂಡ ಈ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಅದಾನಿ ಗ್ರೂಪ್ ಭಾರತದ ಮೂರನೇ ಅತಿದೊಡ್ಡ ಸಮೂಹವಾಗಿದೆ.
ಅದಾನಿ ಅವರ ಸಂಪತ್ತು 60.9 ಶತಕೋಟಿ ಡಾಲರ್‌ಗಳಷ್ಟು ಹೆಚ್ಚಾಗಿದೆ. ಈ ಮೊತ್ತವೂ ಇತರ ಉಳಿದ ಬಿಲೇನಿಯರ್‌ಗಿಂತ ಐದು ಪಟ್ಟು ಹೆಚ್ಚಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy