nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮತುಮಕೂರು ವರದಿಯಿಂದ ಎಚ್ಚೆ‍ತ್ತ ಕೊರಟಗೆರೆ ತಾಲ್ಲೂಕು ಆಡಳಿತ: ಕುಮಟೇನಹಳ್ಳಿ ಗ್ರಾಮಕ್ಕೆ ತಹಶೀಲ್ದಾರ್ ನಹೀದಾ ಜಂ ಜಂ ಭೇಟಿ
    ಕೊರಟಗೆರೆ August 31, 2022

    ನಮ್ಮತುಮಕೂರು ವರದಿಯಿಂದ ಎಚ್ಚೆ‍ತ್ತ ಕೊರಟಗೆರೆ ತಾಲ್ಲೂಕು ಆಡಳಿತ: ಕುಮಟೇನಹಳ್ಳಿ ಗ್ರಾಮಕ್ಕೆ ತಹಶೀಲ್ದಾರ್ ನಹೀದಾ ಜಂ ಜಂ ಭೇಟಿ

    ಇನ್ನೂ ನಿದ್ದೆಯಿಂದ ಎಚ್ಚೆತ್ತುಕೊಳ್ಳದ ಜನಪ್ರತಿನಿಧಿಗಳು
    By adminAugust 31, 2022No Comments2 Mins Read
    koratagere news

    ಕೊರಟಗೆರೆ:  ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ಧರಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಮಟೇನಹಳ್ಳಿ ಗ್ರಾಮವು ಕಂದಾಯ ಗ್ರಾಮಕ್ಕೆ ಒಳಪಟ್ಟಿದ್ದು, ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಸುಮಾರು 25ಕ್ಕೂ ಹೆಚ್ಚು ಮನೆಗಳಿದ್ದು 150ಕ್ಕೂ ಹೆಚ್ಚು ಜನಸಂಖ್ಯೆ ಇರುವ ಈ ಗ್ರಾಮಕ್ಕೆ ರಸ್ತೆಯೇ ಇಲ್ಲ ಈ ಗ್ರಾಮದ ಮಧ್ಯೆ ಹರಿಯುವ ಹಳ್ಳ ರಸ್ತೆಯಾಗಿ ಮಾರ್ಪಟ್ಟಿದೆ.  ಈ ಬಗ್ಗೆ ನಮ್ಮ ತುಮಕೂರು ಮಾಧ್ಯಮದಲ್ಲಿ ಸುದ್ದಿ ಪ್ರಕಟವಾಗಿ ಕೆಲವೇ ಗಂಟೆಗಳಲ್ಲಿ ತಹಶೀಲ್ದಾರ್ ನಹೀದಾ ಜಂ ಜಂ ಸಂದಿಸಿದ್ದಾರೆ.

    ಕುಮಟೇನಹಳ್ಳಿಯಲ್ಲಿ ಸುಮಾರು 25ಕ್ಕೂ ಹೆಚ್ಚು ಮನೆಗಳಿದ್ದು ಸರಿ ಸುಮಾರು 120ಕ್ಕೂ ಹೆಚ್ಚು ಮತದಾರರಿದ್ದಾರೆ. ಸದರಿ ಗ್ರಾಮಕ್ಕೆ ನಕಾಶೆ ರಸ್ತೆ ಇದ್ದು ಇಲ್ಲದಂತೆ ಮಾಯವಾಗಿದೆ. ಸುಮಾರು ಏಳು ವರ್ಷಗಳಿಂದ ಈ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿದ್ದಾರೆ. ಅದರಲ್ಲೂ ರಸ್ತೆ ಸಮಸ್ಯೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದ್ದು, ರಸ್ತೆ ಇಲ್ಲದೆ ಜನರು ಹಳ್ಳವನ್ನೇ ರಸ್ತೆಯನ್ನಾಗಿ ಮಾಡಿಕೊಂಡು ಸಂಚರಿಸುವಂತಾಗಿದೆ.


    Provided by
    Provided by

    ಬೆಂಡೋಣೆ ಗ್ರಾಮದಿಂದ ಒಂದೂವರೆ ಕಿಲೋಮೀಟರ್ ದೂರದಲ್ಲಿರುವ  ಕುಮಟೇನಹಳ್ಳಿ ಗ್ರಾಮದ ಮುಗ್ಧ ಜನರು ಹೊರ ಪ್ರಪಂಚಕ್ಕೆ ಕಾಲಿಡಲು ಹರಸಾಹಸ ಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನಪ್ರತಿನಿಧಿಗಳ ಇಚ್ಛಾ ಶಕ್ತಿಯ ಕೊರತೆ ಇಲ್ಲಿ ಎದ್ದು ಕಾಣುತ್ತಿದೆ.

    ನಕಾಶೆ ರಸ್ತೆ ತೆರವು ಮಾಡಿ ಸುಸಜ್ಜಿತವಾದ ರಸ್ತೆಯನ್ನು ನಿರ್ಮಿಸಲು ಮನವಿ ಸಲ್ಲಿಸಿ  ಊರಿನ ಗ್ರಾಮಸ್ಥರು ಹೋರಾಟ ಮಾಡುತ್ತ ಬಂದಿದ್ದಾರೆ. ಈ ಬಗ್ಗೆ ನಮ್ಮ ತುಮಕೂರು ವಾಹಿನಿಯು ಇಲ್ಲಿನ ಜನರ ಕಷ್ಟಗಳ ಸವಿವರವಾದ ವರದಿ ಮಾಡಿದ ತಕ್ಷಣವೇ ತಹಶೀಲ್ದಾರ್ ಎಚ್ಚೆತ್ತು ಕೊಂಡು ನಕಾಶೆ ರಸ್ತೆ ತೆರವು ಕಾರ್ಯಾಚರಣೆ ಕ್ರಮ ಜರುಗಿಸಿದ್ದಾರೆ.  ಆದರೆ, ಇನ್ನೂ ಕೂಡ ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು ನಿದ್ರೆಯಿಂದ ಎದ್ದಿಲ್ಲ. ಈ ಕುಗ್ರಾಮಕ್ಕೆ ಭೇಟಿ ನೀಡಿ ಜನರಿಗೆ  ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕೆಲಸಕ್ಕೆ ಮುಂದಾಗಬೇಕಿದೆ. ಈಗಾಗಲೇ ಈ ಭಾಗದ ಜನರು ಜನಪ್ರತಿನಿಧಿಗಳ ವಿರುದ್ಧ ತೀವ್ರ ಅಸಮಾಧಾನ ಹೊಂದಿದ್ದು, ಮುಂದಿನ ಚುನಾವಣೆಗೆ ಮತ ಕೇಳಲು ಬನ್ನಿ ಆಗ ನಾವು ಮಾತನಾಡುತ್ತೇವೆ ಎಂಬ ಆಕ್ರೋಶದ ಮಾತುಗಳನ್ನಾಡಿದ್ದಾರೆ.

    ಇನ್ನೂ ಜನರ ಸಮಸ್ಯೆಗೆ ತಕ್ಷಣ ಸ್ಪಂದಿಸುವ ತಹಶೀಲ್ದಾರ್ ನಹೀದಾ ಜಂ ಜಂ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಜನಪ್ರತಿನಿಧಿಗಳು ಒಬ್ಬ ಸರ್ಕಾರಿ ಅಧಿಕಾರಿಯ ಇಚ್ಛಾ ಶಕ್ತಿಯನ್ನು ನೋಡಿಯಾದದರೂ ಕಲಿಯಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ತಹಶೀಲ್ದಾರ್ ಭೇಟಿಯ ವೇಳೆ  ಆರ್ ಐ ಅಮ್ಜದ್, ಗ್ರಾಮ ಸಹಾಯಕರು, ಊರಿನ ಗ್ರಾಮಸ್ಥರು ಸಾರ್ವಜನಿಕರು ಹಾಜರಿದ್ದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

     

     

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಬಸ್‌ ಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಸೂಕ್ತ ತಂಗುದಾಣಗಳಿಲ್ಲದೆ ತೀವ್ರ ತೊಂದರೆಯಾಗುತ್ತಿದೆ.…

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.