ಗಣೇಶೋತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನಾದ್ಯಂತ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ಸಲುವಾಗಿ 31 ಆಗಸ್ಟ್ 2022 ರಂದು ಬೆಳಿಗ್ಗೆ 6 ಗಂಟೆಯಿಂದ 1ಸೆಪ್ಟೆಂಬರ್ 2022 ರಂದು ಬೆಳಿಗ್ಗೆ 6 ಗಂಟೆಯವರೆಗೆ 01 ದಿನ ಹಾಗೂ ವಿಸರ್ಜನೆ ಕಾಲಕ್ಕೆ 09 ಸೆಪ್ಟೆಂಬರ್ 2022 ರಂದು ಬೆಳಿಗ್ಗೆ 6 ಗಂಟೆಯಿಂದ 10 ಸೆಪ್ಟೆಂಬರ್ 2022 ರಂದು ಸಂಜೆ 6 ಗಂಟೆಯವರೆಗೆ ಮದ್ಯದ ಅಂಗಡಿ, ವೈನಶಾಪ್, ಬಾರ್‍ಗಳಲ್ಲಿ, ಕ್ಲಬ್ ಗಳಲ್ಲಿ ಮತ್ತು ಹೊಟೇಲ್‍ಗಳಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸಾಗಣ ಕೆಯನ್ನು ನಿಷೇಧಿಸಲಾಗಿದೆ.
ಮಧ್ಯದ ಅಂಗಡಿಗಳನ್ನು ಹಾಗೂ ಕೆಎಸ್ ಬಿಸಿಎಲ್ ಡಿಪೋಗಳನ್ನು, ಹೊಟೇಲ್‍ಗಳಲ್ಲಿರುವ ಬಾರ್‍ಗಳನ್ನು ಮುಚ್ಚತಕ್ಕದ್ದು ಹಾಗೂ ಎಲ್ಲ ಅಬಕಾರಿ ಸನ್ನದು ಅಂಗಡಿಗಳನ್ನು ಮುಚ್ಚಿ ಸೀಲ್ ಹಾಕತಕ್ಕದ್ದೆಂದು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಬೆಳಗಾವಿ ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.
ಈ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಬೋರಲಿಂಗಯ್ಯ ಎಂ.ಬಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz