ಮುರುಘಾ ಮಠದ ವಸತಿ ನಿಲಯದ ಅಪ್ರಾಪ್ತ ಬಾಲಕಿಯರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದ ಹಾಸ್ಟೆಲ್ ವಾರ್ಡನ್ ರಶ್ಮಿಯನ್ನು ಶುಕ್ರವಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಅಪ್ರಾಪ್ತ ಬಾಲಕಿಯರು ಮೈಸೂರಿನಲ್ಲಿ ಒಡನಾಡಿ ಸಂಸ್ಥೆಯ ನೆರವಿನೊಂದಿಗೆ ಮುರುಘಾ ಶರಣರು ಸೇರಿದಂತೆ ಐವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದರು. ದೂರು ದಾಖಲಾದ 6 ದಿನಗಳಾದರೂ ಶ್ರೀಗಳ ಬಂಧನ ಮಾಡಿರುವ ಕ್ರಮವನ್ನು ಖಂಡಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆ ಮಾಡಲಾಗಿತ್ತು. ಕೊನೆಗೆ ಗುರುವಾರ ರಾತ್ರಿ ಸ್ವಾಮೀಜಿಯನ್ನು ಬಂಧಿಸಲಾಗಿತ್ತು.
ಇದೀಗ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸ್ವಾಮೀಜಿಗೆ ನೆರವಾಗಿರುವ ಆರೋಪ ಎದುರಿಸಿ 2ನೇ ಆರೋಪಿಯಾಗಿದ್ದ ರಶ್ಮಿಯನ್ನು ಗುರುವಾರವೇ ವಶಕ್ಕೆ ಪಡೆದು ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿತ್ತು.
ಶುಕ್ರವಾರದಂದು ರಶ್ಮಿಯನ್ನು ಬಂಧಿಸಿರುವ ಪೊಲೀಸರು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆ ಇದೆ. ಎರಡನೇ ಆರೋಪಿಯಾಗಿರುವ ರಶ್ಮಿ ಸ್ವಾಮೀಜಿಗೆ ಹಣ್ಣು ತೆಗೆದುಕೊಡುವಂತೆ ಹೇಳಿ ನಮ್ಮನ್ನು ರೂಮಿಗೆ ಕಳುಹಿಸುತ್ತಿದ್ದರು ಎಂದು ಬಾಲಕಿಯರು ವಿಚಾರಣೆ ವೇಳೆ ಆರೋಪಿಸಿದ್ದಾರೆ.
ಒಟ್ಟು ಐವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಇದೀಗ ಮುರುಘಾ ಶರಣರು ಹಾಗೂ ರಶ್ಮಿಯನ್ನು ಬಂಧಿಸಲಾಗಿದೆ. ಇನ್ನೂ ಮೂವರು ತಪ್ಪಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಆನಾರೋಗ್ಯದಿಂದ ಆಸ್ಪತ್ರೆ ಸೇರಿದ ಮುರುಘಾ ಶರಣರು
ಗುರುವಾರ ನ್ಯಾಯಾದೀಶರ ಮುಂದೆ ಹಾಜರು ಪಡಿಸಿದ ನಂತರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಆದರೆ ಶುಕ್ರವಾರ ಬೆಳಗ್ಗೆ ಸ್ವಾಮೀಜಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಇದೀಗ ಐಸಿಯುನಲ್ಲಿರಿಸಿ ಮುರುಘಾ ಶರಣರಿಗೆ ಚಿಕಿತ್ಸೆ ಕೊಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy