ತಿಪಟೂರು: ತಾಲೂಕು ಪಂಚಾಯಿತಿ ಆವರಣದಲ್ಲಿ ಜವಾಬ್ದಾರಿಯುತ ಸ್ಥಾನಕ್ಕೆ ಅನ್ಯ ಇಲಾಖೆಯ ಹೊರಗುತ್ತಿಗೆ ಆಧಾರದಲ್ಲಿ ನೌಕರರನ್ನು ನೇಮಿಸಿರುವ ಸರ್ಕಾರದ ಕ್ರಮ ಖಂಡಿಸಿ ತಿಪಟೂರು ತಾಲೂಕು ಪಂಚಾಯಿತಿ ನೌಕರರು ಸಾಂಕೇತಿಕ ಧರಣಿ ನಡೆಸಿದರು.
ತಾಲೂಕು ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷ ಬಸವಲಿಂಗಪ್ಪ ಮಾತನಾಡಿ, ತಾಲೂಕು ಕಾರ್ಯನಿರ್ವಾಹಕ ಹುದ್ದೆ ವಿಭಾಗ ಅಧಿಕಾರಿಗಳಿಗೆ ಸಮಾನ ಹುದ್ದೆಯಾಗಿದ್ದು, ಇಂತಹ ಹುದ್ದೆಗೆ ಗ್ರಾಮ ಪಂಚಾಯಿತಿ ಮಟ್ಟದಿಂದ ಕಾರ್ಯನಿರ್ವಹಿಸಿ ಅನುಭವ ಇರುವ ಅಧಿಕಾರಿಗಳನ್ನು ಪರಿಗಣಿಸದೆ, ರಾಜ್ಯ ಸರ್ಕಾರ ಹಗರಿಬೊಮ್ಮನಹಳ್ಳಿ ಬೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಯಂತರ ಎಸ್ ಎಸ್ ಪ್ರಕಾಶ್ ಅವರನ್ನು ಹೊರಗುತ್ತಿಗೆ ಆಧಾರದಲ್ಲಿ ಹೂವಿನಹಡಗಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಘಟನೆಯನ್ನು ಖಂಡಿಸಿ, ತಾಲೂಕಿನ 26 ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇತರರು ಸೇರಿ ಸರ್ಕಾರದ ವಿರುದ್ಧ ಕಪ್ಪುಪಟ್ಟಿ ಧರಿಸಿ ಮುಷ್ಕರ ನಡೆಸಿದರು. ಬಳಿಕ ಧರಣಿ ನಿರತರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಂ ಸುದರ್ಶನಿಗೆ ಮನವಿ ಪತ್ರ ಸಲ್ಲಿಸಿದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz