ಬೆಳಗಾವಿ: ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು, ಬಾಲಕಿ ಗರ್ಭ ಧರಿಸಲು ಕಾರಣನಾದ ಯುವಕನನ್ನು ಖಾನಾಪುರ ಪೊಲೀಸರು ಬಂಧಿಸಿದ್ದಾರೆ.
ಖಾನಾಪುರ ತಾಲ್ಲೂಕಿನ ಗೌಳಿವಾಡ ಗ್ರಾಮದ ಮಲ್ಲು ಅಪ್ಪು ಪಿಂಗಳೆ (19) ಬಂಧಿತ ಆರೋಪಿ. ಅದೇ ತಾಲ್ಲೂಕಿನ 16 ವರ್ಷದ ಬಾಲಕಿಯನ್ನು ಪುಸಲಾಯಿಸಿ, ಕೆಲ ವರ್ಷಗಳಿಂದ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ.
ಬಾಲಕಿ ಗಂಡುಮಗುವಿಗೆ ಜನ್ಮ ನೀಡಿದ್ದಾಳೆ. ಆರೋಪಿ ಮೇಲೆ ಪೋಕ್ಸೊ ಅಡಿ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz