ಸ್ವಯಂಘೋಷಿತ ದೇವಮಾನವ ನಿತ್ಯಾನಂದನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ, ವೈದ್ಯಕೀಯ ನೆರವು ಕೋರಿ ಶ್ರೀಲಂಕಾ ದೇಶಕ್ಕೆ ಪತ್ರ ಬರೆದಿದ್ದಾನೆ. ಎನ್ನಲಾಗಿದೆ. ಆಸ್ಟ್ರೇಲಿಯಾ ಸಮೀಪದ ದ್ವೀಪವೊಂದನ್ನು ಖರೀದಿಸಿ (ಕೈಲಾಸ ದೇಶ) ಅಲ್ಲಿರುವ ನಿತ್ಯಾನಂದ, ಇಲ್ಲಿ ವೈದ್ಯಕೀಯ ಸೌಲಭ್ಯಗಳಿಲ್ಲ. ತುರ್ತಾಗಿ ಚಿಕಿತ್ಸೆ ಬೇಕಾಗಿದೆ. ನೆರವು ನೀಡಿದರೆ ಆರ್ಥಿಕ ಮುಗ್ಗಟ್ಟಿನಿಂದ ತತ್ತರಿಸಿರುವ ಶ್ರೀಲಂಕಾದಲ್ಲಿ ಕೋಟಿಗಟ್ಟಲೆ ಹಣ ಹೂಡಿಕೆ ಮಾಡುವುದಾಗಿ ಆಮಿಷ ಒಡ್ಡಿದ್ದಾನೆ ಎಂದು ಹೇಳಲಾಗಿದೆ.
ಅತ್ಯಾಚಾರ ಆರೋಪ ಎದುರಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನ ಆರೋಗ್ಯದಲ್ಲಿ ಏರುಪೇರು
ತನಗೆ ವೈದ್ಯಕೀಯ ಆರೈಕೆಯ ‘ತುರ್ತು’ ಅಗತ್ಯವಿದೆ ಎಂದು ಶ್ರೀಲಂಕಾ ಅಧ್ಯಕ್ಷರಿಗೆ ನಿತ್ಯಾನಂದನ ಪತ್ರ
‘ಶ್ರೀಕೈಲಾಸ’ದಲ್ಲಿನ ಮೂಲಸೌಕರ್ಯ ಕೊರತೆ ಉಲ್ಲೇಖಿಸಿ ತನಗೆ ಚಿಕಿತ್ಸೆ ನೀಡುವಂತೆ ದೇವಮಾನವನ ಮನವಿ.
ಅತ್ಯಾಚಾರದ ಆರೋಪ ಎದುರಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಶ್ರೀಲಂಕಾದಲ್ಲಿ ರಾಜಕೀಯ ಆಶ್ರಯ ಬಯಸುತ್ತಿದ್ದಾರೆ ಎಂದು ವರದಿಯಾಗಿದೆ. ತನ್ನ ಆರೋಗ್ಯ ಕ್ಷೀಣಿಸುತ್ತಿರುವುದನ್ನು ಉಲ್ಲೇಖಿಸಿ ನಿತ್ಯಾನಂದ ಆಗಸ್ಟ್ 7ರಂದು ದ್ವೀಪ ರಾಷ್ಟ್ರದ ಅಧ್ಯಕ್ಷರಿಗೆ ಪತ್ರ ಬರೆದಿದ್ದು,ತನಗೆ ವೈದ್ಯಕೀಯ ಆರೈಕೆಯ ‘ತುರ್ತು’ ಅಗತ್ಯವಿದೆ ಎಂದು ಹೇಳಿಕೊಂಡಿದ್ದಾನೆ.
ತನಗೆ ಜೀವ ಬೆದರಿಕೆ ಇದ್ದು, ಶ್ರೀಲಂಕಾದಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ನಿತ್ಯಾನಂದ ಶ್ರೀಲಂಕಾ ಪ್ರಧಾನಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾನೆ. ಈ ಪತ್ರದಲ್ಲಿ ನಿತ್ಯಾನಂದ ಸ್ಥಾಪಿಸಿರುವ ದ್ವೀಪರಾಷ್ಟ್ರ ‘ಶ್ರೀಕೈಲಾಸ’ದಲ್ಲಿನ ವೈದ್ಯಕೀಯ ಮೂಲಸೌಕರ್ಯಗಳ ಕೊರತೆಯನ್ನು ಉಲ್ಲೇಖಿಸಲಾಗಿದೆ.
ಹಿಂದೂ ಧರ್ಮದ ಸರ್ವೋಚ್ಚ ಮಠಾಧೀಶ(SPH) ನಿತ್ಯಾನಂದ ಪರಮಶಿವಂಗೆ ಆರೋಗ್ಯ ಗಂಭೀರ ಸ್ಥಿತಿ ತಲುಪಿದ್ದು, ತುರ್ತು ವೈದ್ಯಕೀಯ ಆರೈಕೆಯ ಅಗತ್ಯವಿದೆ. ಪ್ರಸ್ತುತ ಕೈಲಾಸದಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯಗಳ ಕೊರತೆ ಇದೆ. ನಿತ್ಯಾನಂದನಿಗೆ ಅಗತ್ಯ ಚಿಕಿತ್ಸೆ ನೀಡುವ ತಜ್ಞ ವೈದ್ಯರ ಅಗತ್ಯವಿದೆ. ಸದ್ಯ ಶ್ರೀಕೈಲಾಸದಲ್ಲಿಯೇ ಇರುವ ನಿತ್ಯಾನಂದನಿಗೆ ಅತ್ಯಂತ ತುರ್ತಾಗಿ ಅಗತ್ಯವಿರುವ ವೈದ್ಯಕೀಯ ಮೂಲಸೌಕರ್ಯ ಸಿಗುತ್ತಿಲ್ಲ. ಹೀಗಾಗಿ ಅನಾರೋಗ್ಯಕ್ಕೆ ಒಳಗಾಗಿರುವ ನಿತ್ಯಾನಂದನಿಗೆ ರಾಜಾಶ್ರಯ ನೀಡುವ ಮೂಲಕ ತಾವು ತುರ್ತು ಚಿಕಿತ್ಸೆ ನೀಡಬೇಕು’ ಎಂದು ದ್ವೀಪರಾಷ್ಟ್ರಕ್ಕೆ ಶ್ರೀಕೈಲಾಸದ ಮುಖ್ಯಸ್ಥರು ಮನವಿ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy