ಸರ್ಕಾರಿ ಶಾಲೆಗೆ ಸೇರಿದ ಜಾಗವು ಒತ್ತುವರಿಯಾಗಿದ್ದು, ಶಾಲೆಗೆ ಸೇರಿದ ಜಾಗವನ್ನು ಉಳಿಸುವಂತೆ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ರವರಿಗೆ ಗ್ರಾಮಸ್ಥರು ಕೈ ಮುಗಿದು ಮನವಿ ಮಾಡಿದ ಘಟನೆ ನಡೆದಿದೆ.
ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಸಮೀಪದ ದೊಡ್ಡತ್ತರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೇರಿದ ಜಾಗವನ್ನು ಗ್ರಾಮದ ಪ್ರಭಾವಿ ಮುಖಂಡರುಗಳು ಒತ್ತುವರಿ ಮಾಡಿಕೊಂಡಿದ್ದು, ಒತ್ತುವರಿಯಾದ ಜಾಗವನ್ನು ತೆರವುಗೊಳಿಸಿ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಲಕ್ಷ್ಮೇಗೌಡ ಒತ್ತಾಯಿಸಿದರು.
ನ್ಯಾಯಾಲಯದ ಆದೇಶದಂತೆ ಶಾಲೆಯ ಜಾಗವನ್ನು ಗುರುತಿಸಿ, ಒತ್ತುವರಿಯಾದ ಜಾಗವನ್ನು ತೆರವುಗೊಳಿಸಲು ಇಂದು ಸರ್ವೇ ಅಧಿಕಾರಿ ಹಾಗೂ ಆನೆಗೊಳ ಗ್ರಾಮ ಪಂಚಾಯತಿಯ ಪಿ.ಡಿ.ಓ ಕುಮಾರ್, ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರಾದ ಗೋಪಾಲಕೃಷ್ಣ, ಗ್ರಾಮ ಲೆಕ್ಕದಿಕಾರಿ ಕಾಂತೇಶ್ ರವರು ನೇತೃತ್ವದಲ್ಲಿ ಸರ್ವೇ ಮಾಡಿ ಶಾಲೆಯ ಜಾಗವನ್ನು ಗುರುತಿಸಲೆಂದು ಶಾಲೆಗೆ ಬಂದಾಗ ಶಾಲೆಯ ಜಾಗ ಒತ್ತುವರಿ ಮಾಡಿಕೊಂಡಿರುವ ಪ್ರಭಾವಿ ಮುಖಂಡರು ಸರ್ವೇ ಮಾಡದಂತೆ ತಡೆಗಟ್ಟಿ ವಿನಾ ಕಾರಣ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿದರು.
ಶಾಲೆಯ ಜಾಗದಲ್ಲಿ ಕಸದ ತಿಪ್ಪೆಗಳನ್ನು ಹಾಕಲಾಗಿದ್ದು, ಇದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿದ್ದು, ಶಾಲಾ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗುತ್ತಿದ್ದು, ಕೂಡಲೇ ಜಿಲ್ಲಾ ಅಧಿಕಾರಿ ಹಾಗೂ ತಾಲ್ಲೂಕು ದಂಡಾದಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶಾಲೆಗೆ ಸೇರಿದ ಜಾಗವನ್ನು ತೆರುವು ಮಾಡಿಸಿಕೊಡುವಂತೆ ಮನವಿ ಮಾಡಿದರು.
ವರದಿ: ಶ್ರೀನಿವಾಸ ಮಂಡ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz