nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    • ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
    • ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ
    • ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ:  ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
    • ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ  ಅಧಿಕಾರಿಗಳಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಳೆಹಾನಿ ದುರಸ್ಥಿಗೆ ಶೀಘ್ರ  ನೆರವು ನೀಡಲಾಗುವುದು: ಸಚಿವ ಜೆ.ಸಿ.ಮಾಧುಸ್ವಾಮಿ ಭರವಸೆ
    ಮಧುಗಿರಿ September 4, 2022

    ಮಳೆಹಾನಿ ದುರಸ್ಥಿಗೆ ಶೀಘ್ರ  ನೆರವು ನೀಡಲಾಗುವುದು: ಸಚಿವ ಜೆ.ಸಿ.ಮಾಧುಸ್ವಾಮಿ ಭರವಸೆ

    By adminSeptember 4, 2022No Comments2 Mins Read
    maduswamy

    ಮಧುಗಿರಿ: ತಾಲೂಕಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಾನಿಗೀಡಾಗಿರುವ ಸೇತುವೆ ಹಾಗೂ ರಸ್ತೆಗಳ ದುರಸ್ಥಿಗೆ ಅಧಿಕಾರಿಗಳಿಂದ ವರದಿ ಪಡೆದುಕೊಂಡು ಶೀಘ್ರ ನೆರವು ನೀಡಲಾಗುವುದು ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

    ತಾಲೂಕಿನ ಕಸಬಾ ಬೆಲ್ಲದಮಡುಗು ಕೆರೆ ಕೋಡಿ ಒಡೆದ ಸ್ಥಳಕ್ಕೆ ಭೇಟಿ ನೀಡಿದ ಸಚಿವರು ಪಟ್ಟಣದ ಚೊಳೇನಹಳ್ಳಿ ಕೆರೆ ಕೋಡಿ ದುರಸ್ಥಿ ಕಾರ್ಯ ಹಾಗೂ ಕಾಳೇನಹಳ್ಳಿಯ ಬೃಹತ್ ಸೇತುವೆಗೆ ಆದ ಹಾನಿಯನ್ನು  ಪರಿಶೀಲಿಸಿದ ಸಚಿವರು ಬಳಿಕ ಇಮ್ಮಡಗೊಂಡನಹಳ್ಳಿಯಲ್ಲಿ ಉಂಟಾದ ನೆರೆ ಹಾನಿಯನ್ನು ವೀಕ್ಷಿಸಿದರು.


    Provided by
    Provided by

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಸಣ್ಣ ನೀರಾವರಿ ಇಲಾಖೆಯ ಎಲ್ಲ ಕೆರೆಗಳು ತುಂಬಿದ್ದು, ನದಿಗಳಿಂದ ಹೆಚ್ಚುವರಿ ನೀರು ಹರಿದ ಪರಿಣಾಮ, ಕೆಲವೆಡೆ ಸೇತುವೆ ಹಾಗೂ ರಸ್ತೆಗಳಿಗೆ ಹಾನಿಯಾಗಿದೆ. ಇದಕ್ಕಾಗಿ ಅಗತ್ಯ ನೆರವನ್ನು ಅಧಿಕಾರಿಗಳ ವರದಿ ಬಂದಾಕ್ಷಣ ಬಿಡುಗಡೆ ಮಾಡಲಾಗುವುದು ಎಂದರು.

    ಸಣ್ಣ ನೀರಾವರಿ ಇಲಾಖೆಯ ಕೆರೆಗಳೆಲ್ಲ ತುಂಬಿದ್ದು, ಬೆಲ್ಲದಮಡುಗು ಕೆರೆ ಹೊರತು ಪಡಿಸಿ ಉಳಿದವು ಸುಭದ್ರವಾಗಿವೆ. ಬೆಲ್ಲದಮಡುಗು ಕೆರೆ ಕೋಡಿ, ಚೊಳೇನಹಳ್ಳಿ ಕೆರೆ ಕೋಡಿಯ ದುರಸ್ಥಿಕಾರ್ಯವನ್ನು ಶೀಘ್ರವಾಗಿ ಕೈಗೊಂಡು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು. ಚನ್ನಸಾಗರ, ಇಮ್ಮಡಗೊಂಡನಹಳ್ಳಿ ಹಾಗೂ ಕಾಳೇನಹಳ್ಳಿ ಸೇತುವೆಗೆ ಭಾರಿ ಹಾನಿಯಾಗಿದ್ದು, ಈ ಭಾಗದ ಜನರ ಸಮಸ್ಯೆಗೆ ಶೀಘ್ರ ಮುಂದಾಗಬೇಕೆಂದು ಎಪಿಎಂಸಿ ಮಾಜಿ ಅಧ್ಯಕ್ಷ ಡಾ.ಎಂ.ಜಿ.ಶ್ರೀನಿವಾಸಮೂರ್ತಿ ಸಚಿವರನ್ನು ಒತ್ತಾಯಿಸಿದರು.

    ಶಾಸಕ ಎಂ.ವಿ.ವೀರಭದ್ರಯ್ಯ ಮಾತನಾಡಿ, ಮಳೆಯಿಂದಾಗಿ ಹಲವು ಕಡೆ ಮನೆಗಳು, ಸೇತುವೆ ಹಾಗೂ ರಸ್ತೆಗಳಿಗೆ ಹಾನಿಯಾಗಿದೆ. ಈಗಾಗಲೇ ಜಿಲ್ಲಾಧಿಕಾರಿಗಳನ್ನು ಕರೆಸಿದ್ದು ಇಂದು ಸಚಿವರನ್ನು ಕರೆತಂದು ಎಲ್ಲ ಸಮಸ್ಯೆಗಳನ್ನು ಖುದ್ದು ತೋರಿಸಿದ್ದೇನೆ. ನಾನು ಹೇಳದೆ ಕೆಲಸ ಮಾಡುವವನು. ನನ್ನ ಜನರ ಕಷ್ಟಗಳಿಗೆ ಯಾವ ರೀತಿ ಪರಿಹಾರ ಕೊಡಿಸಬೇಕು ಎನ್ನುವುದು ತಿಳಿದಿದ್ದು, ಅದು ಶೀಘ್ರ ಕಾರ್ಯಗತವಾಗಲಿದೆ. ಪಟ್ಟಣದ ರಸ್ತೆಗಳಿಗೆ ನೂತನ ಸ್ಪರ್ಶ ನೀಡಲು ಮಳೆಯು ಅಡ್ಡಿಯಾಗಿದ್ದು ಮಳೆಗಾಲ ನಿಂತಾಕ್ಷಣ ಸುಂದರ ರಸ್ತೆ ನಿರ್ಮಿಸಲು ಮುಂದಾಗುತ್ತೇವೆ ಎಂದರು.

    ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ, ತಹಶೀಲ್ದಾರ್ ಸುರೇಶ್ ಆಚಾರ್, ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿ ಮೃತ್ಯಂಜಯ ಸ್ವಾಮಿ, ಸಿಇ ರಾಘವನ್, ಎಸ್ಇ ಸಂಜೀವರಾಜು, ಇಇ ರವಿ ಸೂರನ್, ಎಇಇ ರಂಗನಾಥ್, ಎಇಗಳಾದ ಮಂಜುಕಿರಣ್, ಜ್ಞಾನಮೂರ್ತಿ, ರಮೇಶ್ ಕುಮಾರ್, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಇದ್ದರು.

    ವರದಿ :ಅಬಿದ್ ಮಧುಗಿರಿ 


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮಿಡಿಗೇಶಿ ಬಳಿ ಭೀಕರ ಬೈಕ್ ಅಪಘಾತ: ಪತ್ನಿ ಸ್ಥಳದಲ್ಲೇ ಸಾವು, ಪತಿಗೆ ತೀವ್ರ ಗಾಯ

    May 29, 2026

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    May 26, 2026

    ಜನರ ಏಳಿಗೆಗಾಗಿ ಯೋಜನೆಗಳು ಜಾರಿ, ಸರ್ಕಾರಿ ಯೋಜನೆಗಳು ಮತಗಳಿಕೆಗೆ ಅಲ್ಲ: ಶಾಸಕ ಕೆ.ಎನ್.ರಾಜಣ್ಣ

    May 24, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ(5 ರಿಂದ 10ನೇ ತರಗತಿ) ಹಾಗೂ…

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು

    May 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.