ಚಿತ್ರದುರ್ಗ : ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರ ಪೊಲೀಸ್ ಕಸ್ಟಡಿ ಇಂದು ಮುಕ್ತಾಯವಾಗಲಿದ್ದು, ಶ್ರೀಗಳನ್ನು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.
ಮುರುಘಾ ಶರಣರ ಪೊಲೀಸ್ ಕಸ್ಟಡಿ ಬೆಳಗ್ಗೆ 11 ಗಂಟೆಗೆ ಅಂತ್ಯವಾಗಲಿದ್ದು, ತನಿಖಾಧಿಕಾರಿಗಳು ಶರಣರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗೆ ಮತ್ತೊಂದಿಷ್ಟು ಕಾಲಾವಕಾಶ ಬೇಕು ಅನಿಸಿದರೆ ಮತ್ತೆ ವಶಕ್ಕೆ ಪಡೆಯಲಿದ್ದಾರೆ.
ಮುರುಘಾಶ್ರೀಗಳ ನಿರೀಕ್ಷಣಾ ಜಾಮೀನು ವಜಾ ಆಗಿರುವುದರಿಂದ ಸೋಮವಾರ ಮಠದ ವಕೀಲರು ರೆಗ್ಯೂಲರ್ ಬೇಲ್ ಗಾಗಿ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy