ಚಿತ್ರದುರ್ಗ: ಕೆಲವು ತಿಂಗಳುಗಳಿಂದ ಧಾರಕಾರವಾಗಿ ಸುರಿದ ಮಳೆಯಿಂದಾಗಿ ರೈತರ ಜೀವನಾಡಿ ಆಗಿರುವ ವಾಣಿ ವಿಲಾಸ ಸಾಗರ ಕೋಡಿ ಬಿದ್ದಿದೆ. ಸಾಗರ ಕೋಡಿ ಹರಿದಿರುವುದು ಒಂದೆಡೆ ಜನರಿಗೆ ಸಂತಸ ತಂದಿದ್ದರೆ, ಮತ್ತೊಂದೆಡೆ ಜಮೀನುಗಳಿಗೆ ನೀರು ನುಗ್ಗಿದ್ದು, ಜಮೀನು ಜಲಾವೃತವಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರಿಗೆ ತೀವ್ರ ಸಮಸ್ಯೆ ಸೃಷ್ಠಿಯಾಗಿದೆ.
ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿಯ ಗುಡಿಹಳ್ಳಿ ಹಾಗೂ ಗೌನಹಳ್ಳಿಯಲ್ಲಿ ವಿಪರೀತ ಮಳೆಯಿಂದಾಗಿ ರೈತರು ಬೆಳೆದ ಬೆಳೆಗಳು ಇಂದು ಜಲಾವೃತ್ತವಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಯಾದ ಸಿದ್ದೇಶ್ ಜಿ ಹಾಗೂ ತಾಲ್ಲೂಕು ತಹಶೀಲ್ದಾರರಾದ ಪ್ರಶಾಂತ ಕೆ.ಪಾಟೀಲ ಅವರು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಗ್ರಾಮದಲ್ಲಿ ಒಟ್ಟು ಮೂವತ್ತು ಏಕರೆಯುಳ್ಳ , ತೆಂಗು ಬಾಳೆ ಮತ್ತು ಅಡಿಕೆ ಬೆಳೆಗಳು ಮಳೆಯಿಂದಾಗಿ ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದ್ದು, ರೈತರಿಗೆ ನಷ್ಟವಾಗಿದೆ. ಬೆಳೆ ಹಾನಿಯಾದ ಸಂತ್ರಸ್ಥ ರೈತರ ಕುಟುಂಬಗಳಿಗೆ ಸರ್ಕಾರದಿಂದ ಅತಿ ಶೀಘ್ರದಲ್ಲೇ ಪರಿಹಾರ ಒದಗಿಸಿಕೊಡುವುದಾಗಿ ತಾಲ್ಲೂಕು ತಹಶೀಲ್ದಾರರಾದ ಪ್ರಶಾಂತ ಕೆ. ಪಾಟೀಲ ತಿಳಿಸಿದ್ದಾರೆ.
ವರದಿ: ಮುರುಳಿಧರನ್ ಆರ್. ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy