nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026
    Facebook Twitter Instagram
    ಟ್ರೆಂಡಿಂಗ್
    • ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
    • ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!
    • ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
    • ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
    • ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
    • ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
    • ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
    • ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾನುವಾರುಗಳಿಗೆ ರೋಗ ಜಿಲ್ಲೆಯ ರೈತರಿಗೆ ಬಹುಮುಖ್ಯ ಮಾಹಿತಿ
    ರಾಜ್ಯ ಸುದ್ದಿ September 6, 2022

    ಜಾನುವಾರುಗಳಿಗೆ ರೋಗ ಜಿಲ್ಲೆಯ ರೈತರಿಗೆ ಬಹುಮುಖ್ಯ ಮಾಹಿತಿ

    By adminSeptember 6, 2022No Comments2 Mins Read
    belagavi

    ಬೆಳಗಾವಿ ಜಿಲ್ಲೆಯ ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಕಂಡು ಬಂದಿದ್ದು, ಇದು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ.

    ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ತಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ಈ ರೋಗವು ಪಸರಿಸುತ್ತದೆ.


    Provided by
    Provided by

    ರೋಗದ ಲಕ್ಷಣಗಳು:

    ಅತಿಯಾದ ಜ್ವರ (105-180ಈ)ಕಣ್ಣುಗಳಿಂದ ನೀರು ಸೋರುವುದು. ನಿಶಕ್ತಿ, ಕಾಲುಗಳಲ್ಲಿ ಬಾವು ಹಾಗೂ ಕಂಟುವುದು. ಜಾನುವಾರುಗಳ ಚರ್ಮದ ಮೇಲೆ 2-5 ಸೆ.ಮೀ.ನಷ್ಟು ಅಗಲವಿರುವ ಗುಳ್ಳೆ ಕಾಣ ಸಿಕೊಂಡು ನಂತರ ಒಡೆದು ಗಾಯವಾಗಿ ನೋವುಂಟಾಗುತ್ತದೆ. ಸೂಕ್ತ ಚಿಕಿತ್ಸೆ ನೀಡದಿದ್ದಲ್ಲಿ ನೊಣಗಳಿಂದ ಹುಳುಗಳು ಬಿದ್ದು ಹುಣ್ಣಾಗುತ್ತದೆ. ಹಾಲಿನ ಇಳುವರಿ ಕಡಿಮೆಯಾಗುವುದು ಕೆಲಸದ ಸಾಮಥ್ರ್ಯ ಕುಂಠಿತವಾಗುತ್ತದೆ. ಕರುಗಳು ತೀವ್ರವಾಗಿ ಬಳಲಿ ಸಾವಿಗೀಡಾಗಬಹುದು. ಮಿಶ್ರತಳಿ ಜರ್ಸಿ,ಹೆಚ್.ಎಫ್. ರಾಸುಗಳು ಹಾಗೂ ಕರುಗಳು ಈ ರೋಗದಿಂದ ಹೆಚ್ಚು ಬಳಲುತ್ತವೆ.

    ರೋಗ ಹರಡುವಿಕೆ:

    ಸೊಳ್ಳೆ, ಉಣ್ಣೆ , ನೊಣ ಹಾಗೂ ವಿವಿಧ ಕಚ್ಚುವ ಕೀಟಗಳಿಂದ, ಕಲುಷಿತಗೊಂಡ ನೀರು ಹಾಗೂ ಆಹಾರದಿಂದ, ಜಾನುವರುಗಳ ನೇರ ಸಂಪರ್ಕದಿಂದ, ರೋಗ ಹರಡುವಿಕೆ ಪ್ರಮಾಣ 10-20%ರಷ್ಟು ಹಾಗೂ ರೋಗದ ಸಾವಿನ ಪ್ರಮಾಣ 1-5% ಇರುತ್ತದೆ.

    ಚಿಕಿತ್ಸೆ ಹಾಗೂ ತಡೆಗಟ್ಟುವಿಕೆ:

    ಈ ರೋಗವು ವೈರಾಣು ರೋಗವಾಗಿರುವುದರಿಂದ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ. ಹಾಗೂ ಈ ರೋಗಕ್ಕೆ ಯಾವುದೇ ಲಸಿಕೆ ಲಭ್ಯವಿರುವುದಿಲ್ಲ. ಜಾನುವಾರುಗಳಿಗೆ ರೋಗದ ಲಕ್ಷಣಗಳ ತಕ್ಕಂತೆ ಚಿಕಿತ್ಸೆ ನೀಡಬೇಕಾಗುತ್ತದೆ. ದೇಹವನ್ನು ತಂಪಾಗಿಸಲು ಮೈಮೇಲೆ ಹಸಿ ಬಟ್ಟೆ ಹಾಕುವುದು ಹಾಗೂ ತಂಪಾದ ಜಾಗದಲ್ಲಿ ಕಟ್ಟುವುದು.

    ಚರ್ಮದ ಮೇಲಿನ ಗಾಯಗಳಿಗೆ ಪೋಟ್ಯಾಶಿಯಂ ಪರಮಾಂಗನೇಟ್ ದ್ರಾವಣದಿಂದ ತೊಳೆದು ಐಯೋಡಿನ್ ದ್ರಾವಣ, ಮುಲಾಮು ಹಾಗೂ ಬೇವಿನ ಎಣ್ಣೆ ಲೇಪಿಸುವುದು. ರೋಗ ಹರಡುವುದನ್ನು ತಡೆಯಲು ರೋಗಗ್ರಸ್ಥ ಜಾನುವಾರುಗಳನ್ನು ಬೇರ್ಪಡಿಸುವುದು. ರೋಗಗ್ರಸ್ಥ ಜಾನುವಾರುಗಳಿಗೆ ಉಪಯೋಗಿಸಿದ ಎಲ್ಲಾ ಸಾಮಗ್ರಿಗಳನ್ನು ಸ್ವಚ್ಛಗೊಳಿಸುವುದು.
    ಹಸಿರು ಮೇವು, ಪೌಷ್ಠಿಕ ಆಹಾರ ಹಾಗೂ ಲವಣ ಮಿಶ್ರಣ ನೀಡಬೇಕು. ಕುಡಿಯುವ ನೀರಿನಲ್ಲಿ ಬೆಲ್ಲ, ಉಪ್ಪು ಹಾಗೂ ಅಡುಗೆ ಸೋಡಾ ಹಾಕಿ ದಿನಕ್ಕೆ 5-6 ಬಾರಿ ಕುಡಿಸಬೇಕು. ಕೀಟಗಳ ಹಾವಳಿ ತಪ್ಪಿಸಲು ಹಸಿಬೇವಿನ ಸೊಪ್ಪಿನ ಹೊಗೆ ಹಾಕಬೇಕು. ಈ ರೋಗವು ಸೊಳ್ಳೆ, ಉಣ್ಣೆ, ನೊಣ ಹಾಗೂ ಇತರೆ ಕೀಟಗಳಿಂದ ಮುಖ್ಯವಾಗಿ ಹರಡುವುದರಿಂದ ಕೊಟ್ಟಿಗೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು ಹಾಗೂ

    ಫಾರ್ಮಾಲಿನ್(1%)ಫಿನೈಲ್(2%) ಅಥವಾ ಸೋಡಿಯಂ ಹಾಪೀಕ್ಲೊರೈಡ್ (2%) ದಿನಕ್ಕೆ 2 ಬಾರಿ ಸಿಂಪಡಿಸಬೇಕು. ರೋಗಗ್ರಸ್ಥ ಜಾನುವಾರು ಮರಣ ಹೊಂದಿದ್ದಲ್ಲಿ ಆಳವಾದ ಗುಂಡಿಯಲ್ಲಿ ಹೂಳಬೇಕು ಹಾಗೂ ಹೆಚ್ಚಿನ ಮಾಹಿತಿ, ಚಿಕಿತ್ಸೆಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಲು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಾದ ಡಾ: ರಾಜೀವ ಎನ್, ಕೂಲೇರ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ

    May 26, 2026

    ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ನವದೆಹಲಿ/ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ’ಗೆ ಕೇಂದ್ರ ಗೃಹ ಸಚಿವಾಲಯ…

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ

    May 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.