ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಬಿಜೆಪಿ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಕ್ಟೋಬರ್ ನಲ್ಲಿ ನೂತನ ಆಯೋಗ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ವಿಧಾನಸೌಧದದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸರ್ಕಾರಿ ನೌಕರರಿಗೆ ಕೊಟ್ಟ ಮಾತಿನಂತೆ ಅಕ್ಟೋಬರ್ ನಲ್ಲಿ ನೂತನ ವೇತನ ಆಯೋಗ ರಚನೆ ಮಾಡಲಾಗುವುದು.
ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಶಿಫಾರಸು ಹಾಗೂ ವರದಿ ಸಲ್ಲಿಸಲು ಈ ಆಯೋಗ ರಚಿಸಲಿದ್ದು, ನೌಕರರ ಉಳಿದ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ.
ಆರ್ಥಿಕ ಬಲದ ಆಧಾರದ ಮೇಲೆ ಅಭಿವೃದ್ಧಿ, ಜನರ ಆಶೋತ್ತರಗಳಿಗೆ ಸ್ಪಂದನೆ ಜೊತೆಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಶಕ್ತವಾಗಿದೆ ಎಂದು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy