ಬೆಂಗಳೂರು, ಸೆಪ್ಟೆಂಬರ್ 07: ಬೆಂಗಳೂರು ನಗರದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 22 ಕಡೆಗಳಲ್ಲಿ ಏಕಕಾಲಕ್ಕೆ ದಾಳಿಯಾಗಿದ್ದು, ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ.
ಬೆಂಗಳೂರು ನಗರದ 22 ಪ್ರದೇಶಗಳಲ್ಲಿ ಬುಧವಾರ ಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. 45ಕ್ಕೂ ಅಧಿಕ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಕಾರ್ಯದಲ್ಲಿ ತೊಡಗಿದ್ದಾರೆ.
ಬುಧವಾರ ಬೆಳಗ್ಗೆ 6.30ಕ್ಕೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಆರಂಭಿಸಿದ್ದಾರೆ. ಬೆಂಗಳೂರು ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಆಸ್ಪತ್ರೆ ಸೇರಿದಂತೆ ವಿವಿಧ ಕಡೆ ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ.
ಮಣಿಪಾಲ್ ಸಮೂಹ ಸಂಸ್ಥೆಗಳ ಪ್ರಮುಖ ಕಚೇರಿ ಇರುವ ಉಡುಪಿಯ ಮಣಿಪಾಲ್‌ನಲ್ಲಿಯೂ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy