ಬಂಟ್ವಾಳ ಸೆ 8:ಕಳೆದ 3 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಅಮ್ಟಾಡಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ (Mangalore) ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಕೊನೆಯುಸಿರೆಳೆದ್ದಾಳೆ. ಬಂಟ್ವಾಳ ತಾಲೂಕಿನ ಅಮ್ಟಾಡಿ ನಿವಾಸಿ ಲೋಕೇಶ್ ಅವರ ಪುತ್ರಿ ಕವಿತಾ ( 20) ಮೃತಪಟ್ಟ ವಿದ್ಯಾರ್ಥಿನಿ. ಈಕೆ ಸಿದ್ದ ಕಟ್ಟೆ ಸರಕಾರಿ ಕಾಲೇಜಿನ ವಿದ್ಯಾರ್ಥಿನಿ.
ಆಕೆ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಮಂಗಳವಾರ ಸೆ.6 ರಂದು ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ತುಂಬೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು.
ಅಲ್ಲಿ ತೀವ್ರ ನಿಗಾ ಘಟಕ ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕವಿತಾ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.ಕವಿತಾ ಸಿದ್ದಕಟ್ಟೆ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿನಿಯಾಗಿದ್ದು, ಕಲಿಕೆಯಲ್ಲಿ ಮುಂದಿದ್ದಳು. ಸೆ.12 ರಂದು ಪರೀಕ್ಷೆ ನಡೆಯಲಿದ್ದ ಸೆಮಿಸ್ಟರ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಳು ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy