ಬೆಂಗಳೂರು: ಇತ್ತೀಚಿಗೆ ಆಂಧ್ರಪ್ರದೇಶದಲ್ಲಿ ಬಳಿಯಲ್ಲಿ ಗಾಂಜಾ ಗ್ಯಾಂಗ್ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಕಾರು ಅಪಘಾತಕ್ಕೆ ಈಡಾಗಿತ್ತು. ಈ ಘಟನೆಯಲ್ಲಿ ಸಬ್ ಇನ್ಸ್ ಪೆಕ್ಟರ್, ಕಾನ್ಸ್ ಟೇಬಲ್ ಸೇರಿ ಮೂವರು ಸಿಬ್ಬಂದಿ ದಾರುಣವಾಗಿ ಸಾವನ್ನಪ್ಪಿದ್ದರು.
ಈ ಬಳಿಕ ಎಚ್ಚೆತ್ತುಕೊಂಡಿರುವಂತ ರಾಜ್ಯ ಸರ್ಕಾರ, ಪೊಲೀಸರ ರಾತ್ರಿ ಪ್ರಯಾಣವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ.
ಈ ಕುರಿತಂತೆ ರಾಜ್ಯ ಪೊಲೀಸ್ ಇಲಾಖೆಯ ಸಿಐಡಿ, ಡಿಜಿಪಿ ಆದೇಶ ಹೊರಡಿಸಿದ್ದು, ಕಾನೂನು ಸುವ್ಯವಸ್ಥೆ ಬಂದೋಬಸ್ತ್, ಚುನಾವಣಾ ಕರ್ತವ್ಯ, ಅಪರಾಧ ಪ್ರಕರಣಗಳ ತನಿಖೆ ಸೇರಿದಂತೆ ಇನ್ನಿತರ ಅನ್ಯ ಕಾರ್ಯದ ಮೇಲೆ ನಿಯೋಜನೆಗೊಳ್ಳುವಂತ ಪೊಲೀಸ್ ಅಧಿಕಾರಿ, ಸಿಬ್ಬಂದಿ ಯಾವುದೇ ವಾಹನದಲ್ಲಿ ಕರ್ತವ್ಯದ ನಿಮಿತ್ತ ಅಥವಾ ಕರ್ತವ್ಯದಿಂದ ಬಿಡುಗಡೆಯಾದ ನಂತರ, ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಪ್ರಯಾಣ ಮಾಡದಂತೆ ತಿಳಿಸಲಾಗಿದೆ. ಪೊಲೀಸರ ಹಿತದೃಷ್ಠಿಯಿಂದ ರಾತ್ರಿ ಪ್ರಯಾಣ ನಿರ್ಬಂಧಿಸಿ, ಪೊಲೀಸ್ ಇಲಾಖೆಯಿಂದ ಆದೇಶಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


