ತೀವ್ರ ಹೃದಯಾಘಾತದಿಂದ ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದರು. ಇಂದು ಅವರ ಮನೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಬಳಿಕ ಮಾತನಾಡಿದ ಅವರು, ಉಮೇಶ್ ಕತ್ತಿ ಅವರ ರಾಜಕೀಯ ಜೀವನ ಪುಸ್ತಕವಾಗಬೇಕು. ಸಚಿವ ಉಮೇಶ್ ಕತ್ತಿ ನನ್ನ ಆತ್ಮೀಯ ಮಿತ್ರ. ಹೀಗಾಗಿ ನಾವು ಬೆಂಗಳೂರು ದೆಹಲಿಯಲ್ಲಿ ಅನೇಕ ಬಾರಿ ಮಾತುಕತೆ ನಡೆಸಿದ್ದೇನೆ. ಪಕ್ಷ ಕಟ್ಟುವ ಬಗ್ಗೆ ಅನೇಕ ಸಲಹೆ ನೀಡುತ್ತಿದ್ದರು. ಉಮೇಶ್ ಕತ್ತಿ ಬಿಂದಾಸ್ ವ್ಯಕ್ತಿಯಾಗಿದ್ದರು. ಅವರ ಅಗಲಿಕೆಯಿಂದಾಗಿ ಪಕ್ಷ ಹಾಗೂ ರಾಜ್ಯಕ್ಕೆ ನಷ್ಟ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
40 ವರ್ಷಗಳ ಕಾಲದಿಂದ ಜನ ಅವರಿಗೆ ಆಶೀರ್ವಾದ ಮಾಡಿದ್ದಾರೆ. ಅವರ ರಾಜಕೀಯ ಜೀವನವು ಪುಸ್ತಕದ ರೂಪದಲ್ಲಿ ಹೊರ ಬರಬೇಕು. ಒಬ್ಬ ರಾಜಕೀಯ ನಾಯಕ 40 ವರ್ಷಗಳ ಶಾಸಕನಾಗಿ ಮಾಡಿದ ಕೆಲಸ, ಅವರ ದೂರದೃಷ್ಟಿ, ಅವರ ಆಲೋಚನೆಗಳು ಎಲ್ಲರಿಗೂ ಗೊತ್ತಾಗಬೇಕಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy