ಸರಗೂರು: ತಾಲ್ಲೂಕಿನ ಬಿ.ಮಟಕೆರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲನಹಳ್ಳಿ ಗ್ರಾಮದಲ್ಲಿ ಅಕ್ರಂ ಪಾಷಾ ಎಂಬುವರ ಮನೆ ಆನೆಯೊಂದು ದಾಳಿ ನಡೆಸಿದ್ದು, ಬಾಗಿಲು ಮತ್ತು ಗೋಡೆಗೆ ಹಾನಿಯೆಸಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ.
ಮೋಳೆಯೂರು (ಶೀಗೊಡಿ) ವಲಯ ಕಾಡಿನಿಂದ ಬಂದ ಸಾಕಾಣೆ ಅಕ್ರಂ ಪಾಷಾ ಅವರ ಮನೆಯ ಮೇಲೆ ದಾಳಿ ನಡೆಸಿದೆ. ಆನೆ ದಾಳಿ ನಡೆಸುತ್ತಿರುವ ಬಗ್ಗೆ ಅರಣ್ಯಾಧಿಕಾರಿಗಳಿಗೆ ಹಲವು ಬಾರಿ ಕರೆ ಮಾಡಿದರೂ ಸ್ಥಳಕ್ಕೆ ಆಗಮಿಸದೇ ನಿರ್ಲಕ್ಷ್ಯವಹಿಸಿದ್ದು, ಇದರಿಂದಾಗಿ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಬೆಳಿಗ್ಗೆ ಘಟನೆ ನಡೆದಿದ್ದರೆ, ಅರಣ್ಯಾಧಿಕಾರಿಗಳು 11 ಗಂಟೆಯ ವೇಳೆಗೆ ಸ್ಥಳಕ್ಕೆ ಆಗಮಿಸಿದ್ದಾರೆ. ಈ ವೇಳೆ ಆಕ್ರೋಶಿತ ಜನರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆತ್ತಿಕೊಂಡರು. ಅಲ್ಲದೇ ನಷ್ಟಕ್ಕೊಳಗಾಗಿರುವ ಕುಟುಂಬಸ್ಥರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಬಳಿಕ ಮಾತನಾಡಿದ ಅಧಿಕಾರಿ, ಇದು ಕಾಡಾನೆ ಅಲ್ಲ. ಇಂದು ಸಾಕಾಣೆ ಎಂದು ತಿಳಿಸಿದರು. ಮನೆಗೆ ಹಾನಿ ಮಾಡಿ, ಪದಾರ್ಥಗಳನ್ನು ನಾಶ ಮಾಡಿರುವ ಹಿನ್ನೆಲೆಯಲ್ಲಿ ನಮ್ಮ ಮೇಲಿನ ಅಧಿಕಾರಿಗಳಿಗೆ ಮಾಹಿತಿ ನೀಡಿ, ಪರಿಹಾರವನ್ನು ನೀಡುತ್ತೆವೆ ಎಂದು ಭರವಸೆ ನೀಡಿದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz