ಅಕ್ಟೋಬರ 10. ರಂದು ಭಾನುವಾರ ರಾಜ್ಯ ಸರ್ಕಾರದ ವತಿಯಿಂದ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ರಾಜ್ಯಮಟ್ಟದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ.
ಈ ಜಯಂತಿಯ ಪ್ರಯುಕ್ತ ಪರಿಶಿಷ್ಟ ಪಂಗಡದ (ಎಸ್.ಟಿ) ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿರವರ ಸ್ಮರಣಾರ್ಥ ಪ್ರಶಸ್ತಿ ನೀಡಿ ಗೌರವಿಸಲು ಉದ್ದೇಶಿಸಿರುವ ಪ್ರಯುಕ್ತ ರಾಜ್ಯ ಮಟ್ಟದಲ್ಲಿ ಶೈಕ್ಷಣ ಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಅರ್ಹ ವ್ಯಕ್ತಿಗಳು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ನೇರವಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಛೇರಿ ಬೆಳಗಾವಿರವರಿಗೆ ಸಲ್ಲಿಸತಕ್ಕದ್ದು.
ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಛೇರಿ ಬೆಳಗಾವಿ ಇವರ ಕಛೇರಿಯ ದೂರವಾಣ ಸಂಖ್ಯೆ: 0831-2407246ನ್ನು ಹಾಗೂ ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಛೇರಿ ಬೆಳಗಾವಿರವರನ್ನು ಸಂಪರ್ಕಿಸಲು ಕೋರಿದೆ.
ಅರ್ಜಿಗಳನ್ನು ಸಲ್ಲಿಸಲು ಕೊನೆಯ ಸಪ್ಟಂಬರ 15ರೊಳಗೆ ಇರುತ್ತದೆ. ನಂತರ ಬಂದಂತಹ ಅರ್ಜಿಗಳನ್ನು ಪರಿಗಣ ಸಲಾಗುವುದಿಲ್ಲ.ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾನ ಇಲಾಖೆ ಬೆಳಗಾವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy