ಕೇಂದ್ರ ಲೋಕಸೇವಾ ಆಯೋಗವು ನಡೆಸುವ ಅಖಿಲ ಭಾರತ ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆ (IAS /IPS ಮತ್ತು ಇತರೆ) ಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2022-23 ನೇ ಸಾಲಿನಲ್ಲಿ ರಾಷ್ಟ್ರದ ಪ್ರತಿಷ್ಠಿತ ತರಬೇತಿ ಸಂಸ್ಥೆಗಳ ಮೂಲಕ ಪರೀಕ್ಷಾ ಪೂರ್ವತರಬೇತಿ ನೀಡಲು ರಾಜ್ಯದ ಅಲ್ಪಸಂಖ್ಯಾತರ (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ಧ, ಪಾರ್ಸಿ, ಸಿಖ್) ಸಮುದಾಯದವರಿಂದ ಅರ್ಜಿಗಳನ್ನು sw.kar.nic.in Online ಮೂಲಕ ಅಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು: ಸೆಪ್ಟಂಬರ 20 ಕೊನೆಯ ದಿನವಾಗಿದೆ ಹೆಚ್ಚಿನ ವಿವರಗಳಿಗೆ ಇಲಾಖಾ ವೆಬಸೈಟ್ sw.kar.nic.in ರಲ್ಲಿ ನೋಡಬಹುದು.
ಸ್ಪಷ್ಟೀಕರಣಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಹಾಯವಾಣಿ ಸಂಖ್ಯೆ:8277799990 ನ್ನು ಸಂಪರ್ಕಿಸಬಹುದು. ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


