ಚಿಕ್ಕಮಗಳೂರು : ನಗರದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕನೊಬ್ಬ ಬಲಿಯಾಗಿದ್ದು, ಸಿಟ್ಟಿಗ್ಗೆದ್ದ ಜನರು ಆತನ ಮೃತದೇಹವಿಟ್ಟು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿನ್ನೆ ಕೆಲಸದಿಂದ ಮನೆಗೆ ತೆರಳುವ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿ ಸ್ಥಳದಲ್ಲಿ 45 ವರ್ಷ ಅರ್ಜುನ್ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾನೆ. ಸಿಟ್ಟಿಗೆದ್ದ ಜನರು ಪೊಲೀಸ್ ವಾಹನ ಪಲ್ಟಿ ಮಾಡೋದಕ್ಕೆ ಮುಂದಾಗಿದ್ದು, ಘಟನಾ ಸ್ಥಳದಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.
ಕಾಡಾನೆ ದಾಳಿಯನ್ನು ತಡೆಗಟ್ಟಲು ಅರಣ್ಯ ಇಲಾಖೆ ಮುಂದಾಗುತ್ತಿಲ್ಲ. ಜತೆ ಅಧಿಕಾರಿಗಳು ಕೂಡಾ ತಲೆಗೆಡಿಸಿಕೊಳ್ಳುತ್ತಿಲ್ಲ. ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy