ಮೈಸೂರು: ಪ್ರಸ್ತುತ ಹೃದಯಸಂಬಂಧಿಗೆ ಕಾಯಿಲೆಗೆ ಭಾರತದಲ್ಲಿ ಶೇ.30 ರಷ್ಟು ಜನ ಮೃತಪಡುತ್ತಿದ್ದಾರೆ. ಉಳಿದಂತೆ ರಕ್ತದೊತ್ತಡ, ಡಯಾಬಿಟಿಸ್, ಕ್ಯಾನ್ಸರ್, ಸ್ಟ್ರೋಕ್ ಕೂಡ ಮಾನವನನ್ನು ಕಾಡುತ್ತಿದೆ. ಬೇರೆ ದೇಶಕ್ಕೆ ಹೋಲಿಸಿದರೆ 15 ವರ್ಷಗಳಿಗಿಂತ ಮುಂಚಿತವಾಗಿಯೇ ಹೃದಯ ಸಂಬಂಧಿ ಕಾಯಿಲೆ ಭಾರತೀಯರಲ್ಲಿ ಕಾಡುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತರೂ ಆದ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ತಿಳಿಸಿದ್ದಾರೆ.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶುಕ್ರವಾರ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ಯುವಕರಲ್ಲಿ ಹೃದಯಾಘಾತ ಹೆಚ್ಚುತ್ತಿದೆ. 45 ವರ್ಷ ಕಡಿಮೆ ಇರುವ ಶೇ.8ರಷ್ಟು ಮಹಿಳೆಯರಿಗೆ ಹೃದಯಾಘಾತ ಆಗುತ್ತಿದೆ. ಸ್ಮೋಕಿಂಗ್, ಅಧಿಕ ರಕ್ತದೊತ್ತಡ ಹೃದಯಾಘಾತಕ್ಕೆ ಪ್ರಮುಖ ಕಾರಣ ಎಂದು ತಿಳಿಸಿದರು.
ನಮ್ಮ ಸುತ್ತಮುತ್ತಲಿನ ವಾತಾವರಣ ಹಾಗೂ ಜೀವನಶೈಲಿ ನಮ್ಮ ಆರೋಗ್ಯವನ್ನು ನಿರ್ಧರಿಸುತ್ತದೆ. ಭಾರತದಲ್ಲಿ ವಾಯು ಮಾಲಿನ್ಯದಿಂದ 20 ಲಕ್ಷ ಜನ ನಾನಾ ಕಾಯಿಲೆಗೆ ತುತ್ತಾಗಿ ಮೃತ ಪಟ್ಟಿದ್ದಾರೆ. 45 ವರ್ಷದಿಂದ 60 ವರ್ಷದವರಲ್ಲಿ ಹೃದಯ ಸಂಬಂಧಿ ಕಾಯಿಲೆ ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಹೃದಯ ಸಂಬಂಧಿ ಕಾಯಿಲೆ ಫ್ಯಾಮಿಲಿ ಹಿಸ್ಟರಿ ಇದ್ದರೆ ಎಚ್ಚರಿಕೆ ಇರಬೇಕು. ಆಗ್ಗಿಂದಾಗೆ ತಪಾಸಣೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಇನ್ನು ಜಿಮ್, ವ್ಯಾಯಾಮವನ್ನು ದೇಹ ಸಾಮರ್ಥ್ಯಕ್ಕೆ ತಕ್ಕಂತೆ ಮಾಡಬೇಕು. ಒತ್ತಡ, ಭಾರದ ವ್ಯಾಯಾಮಗಳನ್ನು ಮಾಡುವ ಮುಂಚೆ ಮೊದಲು ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು. ದಿನದಿಂದ ದಿನಕ್ಕೆ ಕ್ರಮೇಣ ವ್ಯಾಯಾಮವನ್ನು ಹೆಚ್ಚಿಸಬೇಕು. ಹೆಚ್ಚು ಆಹಾರ ಸೇವನೆ ಮಾಡಿದ್ದೇನೆ ಎಂಬ ಕಾರಣಕ್ಕೆ ಒಮ್ಮೆಲೆ ಹೆಚ್ಚು ವ್ಯಾಯಾಮ ಮಾಡುವುದು ಅಪಾಯಕಾರಿ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz