ನವದೆಹಲಿ: ಪೌರತ್ವ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳು ಸೇರಿದಂತೆ 200 ಕ್ಕೂ ಹೆಚ್ಚು ಪಿಐಎಲಗಳನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ ಎನ್ನಲಾಗಿದೆ .
ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠವು ಸಿಎಎಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಲಿದೆ.
ಸುಪ್ರೀಂ ಕೋರ್ಟ್ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾದ ವ್ಯವಹಾರಗಳ ಪಟ್ಟಿಯ ಪ್ರಕಾರ, ಮುಖ್ಯ ನ್ಯಾಯಮೂರ್ತಿ ಮತ್ತು ನ್ಯಾಯಮೂರ್ತಿ ಎಸ್ ರವೀಂದ್ರ ಭಟ್ ಅವರನ್ನು ಒಳಗೊಂಡ ಪೀಠವು ಸಿಎಎ ವಿರುದ್ಧ ಇಂಡಿಯನ್ ಯೂನಿಯನ್ ಆಫ್ ಮುಸ್ಲಿಂ ಲೀಗ್ನ ಪ್ರಮುಖ ಅರ್ಜಿ ಸೇರಿದಂತೆ 220 ಅರ್ಜಿಗಳನ್ನು ವಿಚಾರಣೆಗೆ ಮುಂದಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz