ಬೈಕ್ ಮೇಲೆ ಮರ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ಮೃತ ಪಟ್ಟ ಘಟನೆ ನಗರದ ರಾಯಣ್ಣ ಸರ್ಕಲ್ ಸರ್ಕಲ್ ಬಳಿ ನಡೆದಿದೆ.
ರಾಯಣ್ಣ ಸರ್ಕಲ್ ನಿಂದ ಇಬ್ಬರು ಯುವಕರು ಚನ್ನಮ್ಮ ಸರ್ಕಲ್ ಕಡೆಗೆ ಬೈಕ್ ಮೇಲೆ ಹೊರಟಿದ್ದರು. ಈ ವೇಳೆ ಮರ ಬೈಕ್ ಮೇಲೆ ಬಿದ್ದ ಪರಿಣಾಮ ಗೋಕಾಕ್ ತಾಲ್ಲೂಕಿನ ಸುಲದಾಳ ಗ್ರಾಮದ ರಾಕೇಶ್ ಸುಲದಾಳ (25 ವರ್ಷ) ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು,ಇನ್ನೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಘಟನೆ ನಡೆಯುತ್ತಿದ್ದಂತೆಯೇ ಸ್ಥಳಕ್ಕೆ ಪೋಲೀಸರು ದೌಡಾಯಿಸಿ ಮರ ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy