ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಪುನಾ-ಬೆಂಗಳೂರು ರಸ್ತೆಯ ವರೂರು ಬಳಿಯ ಗಣೇಶ್ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.
ದಾವಣಗೆರೆ ಮೂಲದ ಚಾಲಕ ಶಾರೂಖ್ (27), ಸೋಹೆಲ್(26) ಮತ್ತು ಎಚ್.ಕೆ. ಸುಶೀಲಾ (38) ಮೃತರು.
ದಾವಣಗೆರೆಯಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿ ಕಡೆಗೆ ಕಾರಿನಲ್ಲಿ ಬರುತ್ತಿದ್ದರು. ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ನಾಲ್ಕು ಬಾರಿ ಪಲ್ಟಿ ಹೊಡೆದಿದೆ.
ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಫಾರುಕ್ ಎಂಬುವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯ ಗ್ರಾಮೀಣ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy