ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿಗೊಳಿಸಿದ್ದು, ಈ ಬಗ್ಗೆ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೆ 19ರಂದು ವಿಚಾರಣೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿದೆ ಎಂದು ಟ್ವೀಟ್ ಮಾಡುವ ಮೂಲಕ ಡಿ.ಕೆ.ಶಿವಕುಮಾರ್ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಭಾರತ್ ಜೋಡೋ ಯಾತ್ರೆ ಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್ ನೀಡಿದೆ.
ನಾನು ಸಹಕರಿಸಲು ಸಿದ್ಧ ಆದರೆ ಈ ಸಮನ್ಸ್ ನೀಡಿರುವ ಸಮಯ ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಈ ಬಗ್ಗೆ ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy