ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್ ಪರೀಕ್ಷೆ ಬರೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮಕ್ಕೆ ಬಳಸಲು ಎಲೆಕ್ಟ್ರಾನಿಕ್ ಡಿವೈಸ್‌ಗಳನ್ನು ಮಾರ್ಪಾಡು ಮಾಡಿ, ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿದ್ದ ಮೂವರನ್ನು ಬೆಳಗಾವಿ ಜಿಲ್ಲಾ ಪೊಲೀಸರು ಶುಕ್ರವಾರ ಬಂಧಿಸಿದ್ದು, ಬಂಧಿತರ ಸಂಖ್ಯೆ 19ಕ್ಕೆ ಏರಿದೆ.
ಅರಭಾಂವಿಯ ಅಕ್ಷಯ ದುಂದಪ್ಪ ಭಂಡಾರಿ (33), ಬಿರಣಗಡ್ಡಿಯ ಬಸವರಾಜ ರುದ್ರಪ್ಪ ದುಂದನಟ್ಟಿ (34) ಹಾಗೂ ರಾಜಾಪುರದ ಶ್ರೀಧರ ಲಕ್ಕಪ್ಪ ಕಟ್ಟಿಕಾರ ಬಂಧಿತರು.
ಪ್ರಕರಣದ ಪ್ರಮುಖ ಆರೋಪಿ ಸಂಜು ಭಂಢಾರಿಗೆ ಅಕ್ಷಯ ಬಂಢಾರಿ ಬೆಂಗಳೂರಿನಿಂದ ಇಲೆಕ್ಟ್ರಾನಿಕ್ ಡಿವೈಸ್‌ಗಳನ್ನು ತಂದು ಕೊಟ್ಟಿದ್ದ ಎನ್ನಲಾಗಿದೆ.
ಆರೋಪಿ ಸಂಜು ಭಂಡಾರಿಯಿಂದ ಪಡೆದು ಶ್ರೀಧರ ಕಟ್ಟಿಕಾರ ಅಭ್ಯರ್ಥಿಗಳಿಗೆ ವಿತರಣೆ ಮಾಡಿರುವುದು ಬೆಳಕಿಗೆ ಬಂದಿದೆ. ಇನ್ನು ಬಸವರಾಜ ದುಂದನಟ್ಟಿಯು ಶಿರಹಟ್ಟಿಯಲ್ಲಿ ಅಭ್ಯರ್ಥಿಗಳಿಗೆ ಪ್ರಶ್ನೆಗಳಿಗೆ ಉತ್ತರ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂವರು ಬಂಧಿತರನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದ್ದು, ಬಂಧಿತರಿಂದ ಮೂರು ಮೊಬೈಲ್ಫೋನ್, ಒಂದು ದ್ವಿಚಕ್ರವಾಹನ ಹಾಗೂ 50 ಖಾಲಿ ಇಲೆಕ್ಟ್ರಾನಿಕ್ ಡಿವೈಸ್ ಮತ್ತು 18 ಮಾಡಿಫೈ ಮಾಡಿರುವ ಇಲೆಕ್ಟ್ರಾನಿಕ್ ಡಿವೈಸ್‌ಗಳನ್ನು ಜಪ್ತಿ ಮಾಡಲಾಗಿದ್ದು, ತನಿಖೆ ಮುಂದುವರಿದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


