ತುಮಕೂರು: ಚಲಿಸುತ್ತಿದ್ದ ಕಾರಿನ ಟಯರ್ ಒಡೆದು 6 ಜನರು ಪ್ರಯಾಣಿಸುತ್ತಿದ್ದ ಫಾರ್ಚುನರ್ ಕಾರು ಮಗುಚಿ ಬಿದ್ದ ಘಟನೆ ಯಡಿಯೂರು ಬ್ರಿಡ್ಜ್ ಸಮೀಪ ಭಾನುವಾರ ನಡೆದಿದೆ.
ಮೈಸೂರಿನಿಂದ ಯಡಿಯೂರಿಗೆ ಬರುತ್ತಿದ್ದ ಕಾರಿನ ಟಯರ್ ಬ್ಲಾಸ್ಟ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದ್ದು, ಸುಮಾರು 50 ಮೀಟರ್ ಗಳವರೆಗೆ ಕಾರು ರಸ್ತೆಯಲ್ಲಿ ಉಜ್ಜಿಕೊಂಡು ಹೋಗಿದೆ.
ಅಪಘಾತಕ್ಕೀಡಾದ ಕಾರಿನಲ್ಲಿ 2 ವರ್ಷದ ಮಗು ಸೇರಿದಂತೆ ಒಟ್ಟು 6 ಮಂದಿ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಕಾರಿನಲ್ಲಿದ್ದ ಯಾರಿಗೂ ಯಾವುದೇ ಗಾಯಗಳಾಗದೇ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.
ವರದಿ: ಶಿವಕುಮಾರ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy