ಪಾಂಡವಪುರ ಚಂದ್ರೆ ಗ್ರಾಮದಲ್ಲಿ 35 ಅಡಿ ಆಳದ ನೀರಿಲ್ಲದ ತೆರದ ಬಾವಿಯಲ್ಲಿ ನವಜಾತ ಶಿಶು ಪತ್ತೆಯಾಗಿತ್ತು. ಗಂಡು ಮಗು ಜೀವಂತವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನವಜಾತ ಶಿಶುಗೆ ಪಾಂಡವಪುರ ತಾಲ್ಲೂಕಿನ ವೈದ್ಯಾಧಿಕಾರಿಗಳ ತಂಡ ಪ್ರಥಮ ಚಿಕಿತ್ಸೆ ನೀಡಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಿಮ್ಸ್‌ಗೆ ಕಳುಹಿಸಿಕೊಟ್ಟಿದೆ. ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಮಿಮ್ಸ್ ಐಸಿಯುನಲ್ಲಿರುವ ಮಗುವಿನ ಆರೋಗ್ಯದ ವೈದ್ಯರಿಂದ ಮಾಹಿತಿ ಪಡೆದುಕೊಂಡರು.
ಮಂಡ್ಯ ಜಿಲ್ಲಾಧಿಕಾರಿ ಎಸ್. ಅಶ್ವತಿ ಸಹ ಸಚಿವರ ಜೊತೆ ಆಸ್ಪತ್ರೆಗೆ ಭೇಟಿ ನೀಡಿದ್ದು, ಜಿಲ್ಲಾಡಳಿತದ ವತಿಯಿಂದ ಮಗುವಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಅಧಿಕಾರಿಗಳು ಸ್ಥಳೀಯ ವ್ಯಕ್ತಿಯೊಬ್ಬನನ್ನು ಬಾವಿಗೆ ಇಳಿಸಿ ಮಗು ರಕ್ಷಣೆ ಮಾಡಿದ್ದರು. ಆಗ ಮಗುವಿನ ಪಕ್ಕದಲ್ಲಿ ಹಾವು ಸಹ ಇತ್ತು. ಗ್ರಾಮದ ಮಹಿಳೆಯೊಬ್ಬರು ಮಗುವಿಗೆ ಎದೆಹಾಲು ಉಣಿಸಿ ಮಾನವೀಯತೆ ಮೆರೆದಿದ್ದದ್ದರು. ಬಳಿಕ ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳಿಸಲಾಗಿತ್ತು. ಪಾಂಡವಪುರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ವಿಮ್ಸ್‌ಗೆ ಕಳಿಸಲಾಗಿದೆ.
ಕಸ ಕಡ್ಡಿ ತುಂಬಿದ್ದ ಬಾವಿಯಲ್ಲಿ ಹಾವಿನ ಪಕ್ಕದಲ್ಲಿ ಮಗು ಇದ್ದರೂ ಮಗುವಿಗೆ ಅಪಾಯವಾಗಿಲ್ಲ. ಮಗುವಿನ ಕೈ, ಕಾಲು ಸೇರಿದಂತೆ ವಿವಿಧ ಭಾಗದಲ್ಲಿ ಇರುವೆಗಳು ಕಚ್ಚಿವೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಮಗು ಪತ್ತೆಯಾದ ಬಗ್ಗೆ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy