ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಶುರುವಾಗಿದ್ದು, ಬಿಎಸ್ ವೈ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದ ಮೇರೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಂ, ಶಶಿಧರ ಮರಡಿ, ಎಸ್.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ವಿರುಪಾಕ್ಷಪ್ಪ, ಕೆ.ರವಿ ಅವರ ವಿರುದ್ಧ ಎಫ್ಐಆರ್ ದಾಖಲಾಗಲಿದೆ.
ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆಗಳನ್ನು ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿಯಿಂದ ಕೋಟ್ಯಾಂತರ ರೂಪಾಯಿ ನಗದು ಪಡೆದಿದ್ದಾರೆ. ಜೊತೆಗೆ ಶೆಲ್ ಕಂಪನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಆರ್ ಟಿಐ ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರು ಖಾಸಗಿ ದೂರು ದಾಖಲಿಸಿದ್ದರು.
ಆದರೆ ರಾಜ್ಯಪಾಲರು ಪೂರ್ವಾನುಮತಿ ನೀಡದ ಕಾರಣ ಜನಪ್ರತಿನಿಧಗಳ ವಿಶೇಷ ನ್ಯಾಯಾಲಯ ದೂರನ್ನ ವಜಾಗೊಳಿಸಿತ್ತು. ಬಳಿಕ ಟಿ.ಜೆ.ಅಬ್ರಾಹಂ ಇದನ್ನ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ ಎಫ್ಐಆರ್ ದಾಖಲಿಸಲು ಹೈಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆ ಪ್ರಕರಣ ದಾಖಲಿಸಿ ವರದಿ ನೀಡುವಂತೆ ಲೋಕಾಯುಕ್ತಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚಿಸಿದೆ. ಹೀಗಾಗಿ FIR ದಾಖಲಿಸಿ ಲೋಕಾಯುಕ್ತ ತನಿಖೆಗೆ ಮುಂದಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy