ಬೆಂಗಳೂರು: ಈ ವರ್ಷದಿಂದಲೇ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಭೋದನೆ ಪ್ರಾರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಈ ವಿಚಾರವಾಗಿ ವಿಧಾನ ಪರಿಷತ್ ಕಲಾಪದಲ್ಲಿ ಸದಸ್ಯ ಎಂ.ಕೆ.ಪ್ರಾಣೇಶ್ ಧ್ವನಿ ಎತ್ತಿದ್ದರು.ಈ ಹಿಂದೆ ಭಗವದ್ಗೀತೆ ಬೋಧನೆಗೆ ಸಮಿತಿ ರಚಿಸುವ ಬಗ್ಗೆ ಹೇಳಲಾಗಿತ್ತು. ಆದರೆ ಈಗ ಬೇರೆಯೇ ಹೇಳಿಕೆ ಹೊರಬಂದಿದೆ.
ಭಗವದ್ಗೀತೆ ಬೋಧಿಸಲು ಸರ್ಕಾರಕ್ಕೆ ಮುಜುಗರವೇನಾದರೂ ಇದೆಯೇ? ಮೊದಲು ಇದ್ದ ಆಸಕ್ತಿ ಈಗ ಯಾಕೆ ಇಲ್ಲ ಎಂದು ಪ್ರಶ್ನೆ ಮಾಡಿದ್ದರು. ಇದಕ್ಕೆ ಶಿಕ್ಷಣ ಸಚಿವರು ಉತ್ತರಿಸಿ, ಈ ವರ್ಷದಿಂದಲೇ ಭಗವದ್ಗೀತೆ ಬೋಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy