ಮೈಸೂರು: ಪ್ರಥಮ ದರ್ಜೆ ಸಹಾಯಕರ ಹುದ್ದೆ ಕೊಡಿಸಲು ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ನರಸಿಂಹರಾಜ ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ಅಶ್ವಿನಿ ಅನಂತಪುರ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಕೆಪಿಎಸ್‌ಸಿ ಪ್ರಥಮದರ್ಜೆ ಸಹಾಯಕರ ನೇಮಕಾತಿ ಪ್ರಕ್ರಿಯೆಯಲ್ಲಿ ಬಸವರಾಜು ಎಂಬುವರಿಗೆ ಹುದ್ದೆ ಕೊಡಿಸಲು ಬಾಗಲಕೋಟೆ ಮೂಲದ ಸಂಗಮೇಶ ಝಳಕಿ ಎಂಬುವರ ಜೊತೆ ಆರೋಪಿ ಪಿಎಸ್‌ಐ ಮಾತನಾಡಿದ್ದೆನ್ನಲಾದ ಮೊಬೈಲ್ ಹಾಗೂ ವಾಟ್ಸಾಪ್ ಆಡಿಯೊ ಸಂಭಾಷಣೆಗಳು ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಅಲ್ಲದೆ, ಹಣ ಅಕ್ರಮ ವರ್ಗಾವಣೆಯ ಬ್ಯಾಂಕ್ ಸ್ಟೇಟ್‌ಮೆಂಟ್ ಕೂಡ ಮಾಧ್ಯಮಗಳಲ್ಲಿ ಬಿತ್ತರಗೊಂಡಿತ್ತು. ಈ ಬಗ್ಗೆ ನಗರ ಅಪರಾಧ ವಿಭಾಗದ ಎಸಿಪಿ ಪ್ರಾಥಮಿಕ ತನಿಖೆ ನಡೆಸಿದ್ದು, ಮೇಲ್ನೋಟಕ್ಕೆ ನೈಜವೆಂದು ತಿಳಿದು ಬಂದ ಹಿನ್ನೆಲೆಯಲ್ಲಿ ಪಿಎಸ್ ಐ ಅಶ್ವಿನಿ ಅವರನ್ನು ಅಮಾನತು ಮಾಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


