ಉತ್ತರ ಕನ್ನಡ ಜಿಲ್ಲೆಯ ಜನರ ಕನಸು ನನಸಾಗುವ ಕಾಲ ಸನಿಹವಾಗಿದ್ದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಿಎಂ ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.
ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ವಿಚಾರ ಕುರಿತು ಆರೋಗ್ಯ ಸಚಿವ ಸುಧಾಕರ್ ನೇತೃತ್ವದಲ್ಲಿ ಪ್ರಥಮ ಹಂತದ ಸಭೆ ನಡೆಯಿತು. ಸಭೆಯಲ್ಲಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಶಿವರಾಮ್ ಹೆಬ್ಬಾರ್ ಉತ್ತರ ಕನ್ನಡ ಜಿಲ್ಲಾ ಶಾಸಕರು ಉಪಸ್ಥಿತರಿದ್ದರು.
ಈ ಸಂಬಂಧ ಸರ್ಕಾರ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಕಳಿಸಿದ್ದು, ಶೀಘ್ರವೇ ಆರ್ಥಿಕ ಇಲಾಖೆಯಿಂದ ಗ್ರೀನ್ ಸಿಗ್ನಲ್ ಸಾಧ್ಯತೆ ಎನ್ನಲಾಗಿದೆ.
ಸಭೆ ಬಳಿಕ ಮಾತನಾಡಿದ ಶಾಸಕಿ ರೂಪಾಲಿ ನಾಯ್ಕ್, ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಒಪ್ಪಿದೆ. ಸಚಿವರು ಒಪ್ಪಿದ್ದಾರೆ. ಜಾಗ ನಿಗದಿಪಡಿಸಬೇಕಿದೆ. ತಾತ್ಕಾಲಿಕವಾಗಿ ಮೆಡಿಕಲ್ ಕಾಲೇಜು ಮೇಲ್ದರ್ಜೆಗೆ ಏರಿಸಲು ತೀರ್ಮಾನಿಸಲಾಗಿದೆ. ಸದನ ಮುಗಿದ ಬಳಿಕ ಸಚಿವ ಸುಧಾಕರ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy