ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಜಟ್ಟಿ ಅಗ್ರಹಾರ ಗ್ರಾಮದಲ್ಲಿ ಡಾ.ವಿಷ್ಣುವರ್ಧನ್ ರವರ ಹುಟ್ಟುಹಬ್ಬವನ್ನು ಕೇಕ್ ಕಟ್ ಮಾಡುವ ಮೂಲಕ ಆಚರಿಸಲಾಯಿತು.
ಸಾಹಸ ಸಿಂಹ, ಅಭಿನಯ ಭಾರ್ಗವ, ಕೋಟಿಗೊಬ್ಬ ಹೀಗೆ ನಾನಾ ಬಿರುದುಗಳಿಂದ ಜನಪ್ರಿಯತೆ ಪಡೆದಿರುವ ಡಾ.ವಿಷ್ಣುವರ್ಧನ್ ಅವರು ದೈಹಿಕವಾಗಿ ಇಲ್ಲದಿದ್ದರೂ ಅಭಿಮಾನಿಗಳ ಮನದಲ್ಲಿ ಇನ್ನು ಜೀವಂತವಾಗಿದ್ದಾರೆ. ವಿಷ್ಣು ನೆನಪಲ್ಲೇ ಅಭಿಮಾನಿಗಳು ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ.
ಅನೇಕ ಸಾಮಾಜಿಕ ಸೇವೆಗಳ ಮೂಲಕ ವಿಷ್ಣುದಾದಾ ಅವರನ್ನು ನೆನೆಯುವ ಕೆಲಸ ಅಭಿಮಾನಿಗಳು ಮಾಡುತ್ತಿದ್ದು, ರಾಜ್ಯದಾದ್ಯಂತ ಅಭಿಮಾನಿಗಳು ಹಬ್ಬದಂತೆ ಹುಟ್ಟುಹಬ್ಬ ಆಚರಿಸುತ್ತಿದ್ದು, ಇದೆ ರೀತಿ ಕೊರಟಗೆರೆ ತಾಲೂಕಿನ ಸಿ.ಎನ್.ದುರ್ಗಾ ಹೋಬಳಿಯ ಜಟ್ಟಿ ಅಗ್ರಹಾರ ಗ್ರಾಮದಲ್ಲಿಯೂ ವಿಜೃಂಭಣೆಯಿಂದ ಆಚರಿಸಲಾಯಿತು.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy