ಬೆಂಗಳೂರು : ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ತೆರಳಿದ ಮಾಜಿ ಸಿಎಂ ಯಡಿಯೂರಪ್ಪ ಭೇಟಿ ಆರೋಗ್ಯ ವಿಚಾರಿಸಿ, ಕೆಲ ಹೊತ್ತು ಮಾತುಕತೆ ನಡೆಸಿದರು.
ನಂತರ ಸುದ್ದಿಗಾರರ ಜೊತೆ ಮಾತನಾಡಿದ ಬಿ.ಎಸ್ ಯಡಿಯೂರಪ್ಪ ಮಾಜಿ ಪ್ರಧಾನಿ ದೇವೇಗೌಡರನ್ನು ಒಂದು ತಿಂಗಳ ಹಿಂದೇಯೇ ನೋಡಲು ಬರಬೇಕಂದಿದ್ದೆ, ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದರು.
ನಾನು ಕಂಡಂತೆ ಇಡೀ ರಾಜ್ಯವನ್ನು ಸುತ್ತಿದಂತಹ ವ್ಯಕ್ತಿ ಇದ್ದರೆ ಅದುವೇ ದೇವೇಗೌಡರು, ಅವರಿಗೆ ದೇವರು ಆರೋಗ್ಯ ಕೊಡಲಿ, ಚೆನ್ನಾಗಿಡಲಿ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy