ಹೆಚ್.ಡಿ.ಕೋಟೆ: ಕೆಲಸ ಕೊಡಿ, ಸಂಬಳ ಹೆಚ್ಚಿಸಿ ಎಂಬ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಜಿಲ್ಲಾ ಸಂಚಾಲಕಿ ಎಚ್. ವಿ.ವಿನುತಾ, ಒಂದು ಕುಟುಂಬಕ್ಕೆ 200 ದಿನಗಳ ಕೆಲಸ ನೀಡಬೇಕು. ಕಾರ್ಮಿಕರು ಅತಿವೃಷ್ಟಿಯಿಂದಾಗಿ ಬೆಳೆ ಹಾನಿಯಾಗಿ ಊಟಕ್ಕೂ ಗತಿಯಿಲ್ಲದೆ ಪರದಾಡುತ್ತಿದ್ದಾರೆ. ತಕ್ಷಣ ಅವರಿಗೆ ಪರಿಹಾರವನ್ನು ನೀಡಬೇಕು ಎಂದು ಒತ್ತಾಯಿಸಿದರು.
ಗ್ರಾಮ ಪಂಚಾಯಿತಿಯಿಂದ ಸಾಮಗ್ರಿಗಳು ಪೂರೈಸಿ , ಇಲ್ಲವಾದಲ್ಲಿ ಕೂಲಿಕಾರ್ಮಿಕರಿಗೆ 20 ರೂಪಾಯಿಗಳಿಗೆ ಹೆಚ್ಚಿಸಿ ಖಾತೆಗೆ ಜಮಾ ಮಾಡಬೇಕು. ಕಾರ್ಮಿಕರಿಗೆ ಸ್ಥಳೀಯವಾಗಿ ಕೆಲಸ ಲಭ್ಯವಿಲ್ಲ ಎಂದಾದಲ್ಲಿ 5 ಕಿಲೋ ಮೀಟರ್ ಗಿಂತಲೂ ಹೆಚ್ಚಿನ ದೂರದಲ್ಲಿ ಕೆಲಸ ನೀಡಿದರೆ ಕೂಲಿ ಹಣದ ಶೇಕಡಾ 10ರಷ್ಟು ಹಣ ನೀಡಲಾಗುತ್ತಿತ್ತು. ಅದು ಸಾಕಾಗುತ್ತಿಲ್ಲ ಅದನ್ನು ಶೇ.20ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಕಾರ್ಮಿಕರು ಕೆಲಸ ಮಾಡಿದ ಹದಿನೈದು ದಿನಗಳ ಒಳಗಾಗಿ ಕೂಲಿ ಪಾವತಿ ಆಗಬೇಕು. ಆದರೆ, ಕಾರ್ಮಿಕರು ಕೆಲಸ ಮಾಡಿದರೂ ಅವರಿಗೆ ಹಣ ಪಾವತಿಯಾಗುತ್ತಿಲ್ಲ. ಮಹಿಳೆಯರಿಗೆ ಪ್ರತಿ ಕಾರ್ಮಿಕರಂತೆ 5 ರೂ. ಪುರುಷರಿಗೆ 4 ರೂ. ನೀಡಬೇಕೆಂದು ಆದೇಶವಿದ್ದರೂ ನೀಡುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಇದೇ ವೇಳೆ ಪ್ರತಿಭಟನಾಕಾರರು ತಹಶೀಲ್ದಾರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಈ ವೇಳೆ ಮಲ್ಲಿಗೆ, ಶೋಭಾ, ಕೆಂಪಣ್ಣ, ಸುಶೀಲಮ್ಮ, ಹೊಮ್ಮರಗಳ್ಳಿ ಮಹದೇವು, ನಾಗಮ್ಮ, ಭಾಗ್ಯ ಸೇರಿದಂತೆ ಕಾರ್ಮಿಕರು ಹಾಜರಿದ್ದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy