ಇಂದು ಬೆಂಗಳೂರು, ಮಂಗಳೂರು ಸೇರಿದಂತೆ ದೇಶದಾದ್ಯಂತ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಪಿಎಫ್ ಐ ಮತ್ತು ಎಸ್ ಡಿಪಿಐ ನಾಯಕರ ಕಚೇರಿ ಮನೆ ಮೇಳೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಾಳಿ ನಡೆಸಿದೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, PFI, SDPI ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ. ಕೇಂದ್ರ ಸರ್ಕಾರ ಈ ಕುರಿತು ನಿರ್ಧಾರ ತೆಗೆದುಕೊಳ್ಳುತ್ತೆ. ಸಂಘಟನೆಗಳನ್ನ ಬ್ಯಾನ್ ಮಾಡಲು ಸಮಯ ಬರಬೇಕು. ಶಂಕಿತ ಉಗ್ರರನ್ನ ಬಂಧಿಸಿದ ಪೊಲೀಸರಿಗೆ ಅಭಿನಂದನೆ. ಧರ್ಮ ನೋಡಿ ಪೊಲೀಸರು ಕಾರ್ಯಚರಣೆ ಮಾಡಲ್ಲ ಎಂದು ಶಿವಮೊಗ್ಗ ಪೊಲೀಸರಿಗೆ ಗೃಹಸಚಿವ ಅರಗ ಜ್ಞಾನೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ.
ಮಾಹಿತಿ ಆಧಾರದ ಮೇಲೆ ಎನ್ ಐಎ ದಾಳಿ ಮಾಡಿದೆ. ಅದನ್ನ ತಡೆಯುತ್ತಾರೆ ಎಂದರೇ ಏನರ್ಥ..? ಇಂಥ ದುಷ್ಟ ಶಕ್ತಿಗಳಿಗೆ ಬೆಂಬಲ ಕೊಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಎನ್ ಐಎ ದಾಳಿಯಲ್ಲಿ ಯಾವುದೇ ರಾಜಕೀಯ ಇಲ್ಲ. ಪಿಎಫ್ ಐ ಏನೇನು ಕೃತ್ಯ ಮಾಡುತ್ತಿದೆ ಎಂಬುದು ಗೊತ್ತಿದೆ. ಕಾಂಗ್ರೆಸ್ ಇಂತಹ ಶಕ್ತಿಗಳನ್ನ ಬೆಳೆಸಿದ್ದರಿಂದ ಪ್ರಾಣಹಾನಿ ಸಂಭವಿಸುತ್ತಿದೆ ಎಂದು ಅರಗ ಜ್ಞಾನೇಂದ್ರ ಕಿಡಿಕಾರಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy