ಬೆಳಗಾವಿ: ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆರವರು ಬೆಂಗಳೂರಿನಲ್ಲಿ ಇಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ ಅವರನ್ನು ಬೇಟಿಯಾಗಿ ಭಿಮ್ಸ್ ಆಸ್ಪತ್ರೆಯ ಆವರಣದಲ್ಲಿ ನರ್ಸಿಂಗ್ ಶಾಲೆ, ವಸತಿಗೃಹ ಹಾಗೂ ಹೆಚ್ಚುವರಿಯಾಗಿ 450 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಗಾಗಿ ಮನವಿಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲೆಯ ಅನೇಕ ಕಡೆಗಳಿಂದ ಮತ್ತ ಹೊರ ರಾಜ್ಯಗಳಾದ ಗೋವಾ ಮತ್ತು ಮಹರಾಷ್ಟ್ರಗಳಿಂದ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ರೋಗಿಗಳು ಬರುವುದರಿಂದ ಹಾಗೂ ಜನಸಂಖ್ಯೆಯು ಹೆಚ್ಚಾಗಿರುವುದರಿಂದ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಭೀಮ್ಸ್ ಆವರಣದಲ್ಲಿ ಹೆಚ್ಚುವರಿಯಾಗಿ 450 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಹಾಗೂ ಬಿಮ್ಸ ಆವರಣದಲ್ಲಿ ನರ್ಸಿಂಗ್ ಶಾಲೆ, ವಸತಿಗೃಹಗಳ ನಿರ್ಮಾಣಕ್ಕೆ ಅಗತ್ಯ ಅನುದಾನವನ್ನು ಮಂಜುರು ಮಾಡುವಂತೆ ಮನವಿಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾನ್ಯ ಸಚಿವರು ಶಾಸಕರ ಮನವಿಗೆ ಸಕಾರಾತ್ಮಕ ಸ್ಪಂದನೆಯನ್ನು ವ್ಯಕ್ತಪಡಿಸಿದ್ದು, ತ್ವರಿತವಾಗಿ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy