ಕಲಬುರಗಿ: ಜಿಲ್ಲೆಯಲ್ಲಿ ಮರಳು ಸಾಗಣೆಗೆ ಲಂಚ ಪಡೆಯುತ್ತಿದ್ದ ಮೂವರು ಪೊಲೀಸರು ಲೋಕಾಯುಕ್ತ ಅಧಿಕಾರಿಗಳ ಬಲೆ ಬಿದ್ದಿದ್ದಾರೆ.
ಜೇವರ್ಗಿ ಠಾಣೆ ಇನ್ಸ್’ಪೆಕ್ಟರ್ ಹಾಗೂ ಇಬ್ಬರು ಕಾನ್ಸ್’ಟೇಬಲ್’ಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಮರಳು ವ್ಯಾಪಾರಿ ಅಖಿಲ್ ಅವರ ಬಳಿ 10 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದ ಶಿವರಾಯ ಅರಳಗುಂಡಗಿ, ಜೇವರ್ಗಿ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಹಣ ಪಡೆಯುವಾಗ ಲೋಕಾಯುಕ್ತರು ದಾಳಿ ನಡೆಸಿದ್ದರು. ಈ ವೇಳೆ ಶಿವರಾಯ ಹಣದ ಸಮೇತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎನ್ನಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy