ಮದುವೆ ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಮನೆಗೆ ನುಗ್ಗಿದ ಖದೀಮರು ಮನೆಯಲ್ಲಿದ್ಧ ನಗದು ಮತ್ತು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಸಂಪಂಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಮಂಜುನಾಥ್ ಎಂಬುವವರ ಮನೆಯಲ್ಲಿ ದರೋಡೆಕೋರರು 43 ಲಕ್ಷ ನಗದು ಮತ್ತು 250 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಮಂಜುನಾಥ್ ಅವರು ಜಮೀನು ಮಾರಾಟ ಮಾಡಿ 43 ಲಕ್ಷ ರೂ ಹಣವನ್ನ ಮನೆಯಲ್ಲಿಟ್ಟಿದ್ದರು. ಈ ನಡುವೆ ಮದುವೆ ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಬಂದ ಖದೀಮರು ಮನೆಯಲ್ಲಿದ್ಧ ಮಂಜುನಾಥ್ ಅವರ ಪತ್ನಿ ಮಮತಾ ಅವರಿಗೆ ಮತ್ತು ಬರುವ ಸ್ಪ್ರೈ ಮಾಡಿ ಹಣ ಹಣ ಮತ್ತು ಚಿನ್ನಾಭರಣವನ್ನ ದೋಚಿದ್ದಾರೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


