ಬೆಂಗಳೂರು: ನಾಡಗೀತೆ ಹಾಡುವ ಅವಧಿ 2 ನಿಮಿಷ 30 ಸೆಕೆಂಡ್‌ಗೆ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಟ್ವಿಟ್ ಮಾಡಿರುವ ಸಚಿವ ಸುನೀಲ್ ಕುಮಾರ್ ಕುವೆಂಪು ವಿರಚಿತ ನಾಡಗೀತೆ ಜಯಭಾರತ ಜನನಿಯ ತನುಜಾತೆದಾಟಿ ಕಾಲಮಿತಿಯನ್ನು ನಿಗದಿ ಮಾಡಲಾಗಿದೆ ಎಂಬುದನ್ನು ತಿಳಿಸಲು ಹರ್ಷವೆನಿಸುತ್ತಿದೆ.
ಎಸ್.ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ಶಿಫಾರಸು ಮಾಡಿದ ಪ್ರಕಾರ ಮೈಸೂರು ಅನಂತಸ್ವಾಮಿ ರಾಗಸಂಯೋಜನೆಯಲ್ಲಿ ಇನ್ನು ನಾಡಗೀತೆಯನ್ನು ಎರಡು ನಿಮಿಷ ಮೂವತ್ತು ಸೆಕೆಂಡ್ ನಲ್ಲಿ ಹಾಡಲಾಗುತ್ತದೆ ಅಂತ ತಿಳಿಸಿದ್ದಾರೆ.
ಎಸ್ .ಆರ್.ಲೀಲಾವತಿ ಅಧ್ಯಕ್ಷತೆಯ ಸಮಿತಿ ಜಯ ಭಾರತ ಜನನಿಯ ತನುಜಾತೆ ಹಾಡುವ ಅವಧಿಯನ್ನು 2.30 ನಿಮಿಷಕ್ಕೆ ನಿಗದಿ ಮಾಡಬೇಕು ಎಂದು ಶಿಫಾರಸು ಮಾಡಿತ್ತು, ಅದರಂತೆ ಈಗ ರಾಜ್ಯ ಸರ್ಕಾರ ಶಿಫಾರಸ್ಸು ಒಪ್ಪಿಕೊಂಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy