ಹೆಚ್.ಡಿ.ಕೋಟೆ: ತಾಲೂಕು ವ್ಯವಸಾಯೋತ್ಪನ್ನ, ಮಾರಾಟ ಸಹಕಾರ ಸಂಘದ ವತಿಯಿಂದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಹೆಚ್.ಡಿ.ಕೋಟೆ ಪಟ್ಟಣದ ಸಂಘದ ಅಕ್ಕಿಗಿರಣಿ ಆವರಣದಲ್ಲಿ ಆಯೋಜಿಸಲಾಗಿತ್ತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಅಧ್ಯಕ್ಷ ಮೊತ್ತಬಸವರಾಜಪ್ಪ, ಸದಸ್ಯರ ಸರ್ವಾನುಮತದಿಂದ ಸಹಕಾರ ಸಂಘವನ್ನು ಅಭಿವೃದ್ಧಿಪಡಿಸುವಲ್ಲಿ ಸರ್ವಸದಸ್ಯರ ಸಹಕಾರ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಮರಣ ಹೊಂದಿದ ಸದಸ್ಯರ ಕುಟುಂಬಕ್ಕೆ ಪರಿಹಾರ ಒದಗಿಸಬೇಕೆಂದು ಒಕ್ಕೊರಳಿಂದ ಸರ್ವ ಸದಸ್ಯರು ಒತ್ತಾಯಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಆಡಳಿತ ಮಂಡಳಿ ಮುಂದಿನ ದಿನಗಳಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿತು.
ಕಾರ್ಯದರ್ಶಿ ಬೊಪ್ಪನಹಳ್ಳಿ ನಿಂಗರಾಜು ಸಭೆಯನ್ನು ಯಶಸ್ವಿಯಾಗಿ ನಡೆಸಿಕೊಟ್ಟರು. ಸದಸ್ಯರಾದ ಎಂ.ಮಹದೇವಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.
ಸಭೆಯಲ್ಲಿ ಅಧ್ಯಕ್ಷರಾದ ಬಸವರಾಜಪ್ಪ, ಉಪಾಧ್ಯಕ್ಷ ನೂರ್ ಅಹಮದ್, ಮಾದಪ್ಪ, ಯೋಗನರಸಿಂಹಗೌಡ, ಗುಣಪಾಲ, ಭುಜಂಗನಾಯಕ, ಶಿವಸ್ವಾಮಿ, ಈಶ್ವರ, ಮಾದಯ್ಯ, ಲಲಿತಮ್ಮ ಕೆಂಚಮ್ಮ, ರಾಜಣ್ಣ ಶಿವರಾಜು, ಸಿಬ್ಬಂದಿಗಳಾದ ಕಾರ್ಯದರ್ಶಿ ನಿಂಗರಾಜು, ಮಲ್ಲಪ್ಪ, ದೀಪಕ್, ಸೋಮು, ಗುರು ಹಾಗೂ ನೂರಾರು ಸಂಖ್ಯೆಯ ಸದಸ್ಯರು ಹಾಜರಿದ್ದರು.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy