nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026

    KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು

    August 9, 2026
    Facebook Twitter Instagram
    ಟ್ರೆಂಡಿಂಗ್
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    • ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
    • ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
    • ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 4 ತಿಂಗಳಿನಿಂದ ವೇತನವಿಲ್ಲ:  ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳಿಂದ ಧರಣಿ
    ಕೊರಟಗೆರೆ September 25, 2022

    4 ತಿಂಗಳಿನಿಂದ ವೇತನವಿಲ್ಲ:  ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳಿಂದ ಧರಣಿ

    By adminSeptember 25, 2022No Comments2 Mins Read
    korategere

    ಕೊರಟಗೆರೆ:  ಪಟ್ಟಣದ ತಾಲ್ಲೂಕು ಆಡಳಿತ ಕಛೇರಿ ಪಕ್ಕದಲ್ಲಿ ಇರುವ ಇಂದಿರಾ ಕ್ಯಾಂಟೀನ್ ಸಿಬ್ಬಂದಿಗೆ ಸುಮಾರು 4 ತಿಂಗಳಿನಿಂದ ವೇತನ ನೀಡಿಲ್ಲ, ಮಾತ್ರವಲ್ಲದೇ ಆಹಾರ ಸಾಮಗ್ರಿ ಕೂಡ ಸರಬರಾಜು ಮಾಡುತ್ತಿಲ್ಲವೆಂದು ಸಿಬ್ಬಂದಿ ವರ್ಗ ಕ್ಯಾಂಟೀನ್ ಮುಂದೆ ಧರಣಿ ಸತ್ಯಾಗ್ರಹ ನಡೆಸಿದರು.

    5 ವರ್ಷಗಳ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರದಲ್ಲಿ  ಇದ್ದಾಗ ಆರಂಭವಾದ ಇಂದಿರಾ ಕ್ಯಾಂಟೀನ್ ಗಳು, ಕಡಿಮೆ ಬೆಲೆಯಲ್ಲಿ ಸಾರ್ವಜನಿಕರ ಹಸಿವು ನೀಗಿಸುತ್ತಿತ್ತು. ಕ್ಯಾಂಟೀನ್ ಮುಂದೆ ಜನರ ಉದ್ದುದ್ದ ಸಾಲುಗಳಿದ್ದವು. ಅಪಾರ ಸಂಖ್ಯೆಯಲ್ಲಿ ಜನರು ಇದರ ಸದುಪಯೋಗ ಪಡೆಯುತ್ತಿದ್ದರು. ರೈತರು, ಶಾಲಾ ಮಕ್ಕಳು, ಆಟೋ ಚಾಲಕರು ಸೇರಿದಂತೆ ಸಾರ್ವಜನಿಕರಿಗೆ ಕ್ಯಾಂಟಿನ್ ಸಹಕಾರಿಯಾಗಿತ್ತು. ಆದರೆ ಇತ್ತೀಚೆಗೆ ಇಂದಿರಾ ಕ್ಯಾಂಟೀನ್ ಚಿತ್ರಣ ಬದಲಾಗಿದೆ ಎಂದು ಧರಣಿ ನಿರತರು ಬೇಸರ ವ್ಯಕ್ತಪಡಿಸಿದರು.

    ಕೊರಟಗೆರೆ ಪಟ್ಟಣದ ತಾಲೂಕು ಕಛೇರಿಯ ಬಳಿಯಲ್ಲಿರುವ ಇಂದಿರಾ ಕ್ಯಾಂಟೀನ್ ನಡೆಸಲು ಗುತ್ತಿಗೆ ಪಡೆದ ಬೆಂಗಳೂರು ಮೂಲಕ ಗುತ್ತಿಗೆದಾರ ಇಂದಿರಾ ಕೊರಟಗೆರೆ ಪಟ್ಟಣದ ಕ್ಯಾಂಟೀನ್ ಗೆ ಕಳೆದ 8 ತಿಂಗಳಿನಿಂದ ಸಮರ್ಪಕವಾಗಿ ಆಹಾರ ಸಾಮಗ್ರಿಗಳನ್ನು, ತರಕಾರಿಗಳನ್ನು ಸರಬರಾಜು ಮಾಡದೆ ಸಿಬ್ಬಂದಿಗಳಿಗೆ 4 ತಿಂಗಳಿನಿಂದ ವೇತನ ನೀಡದೆ,  ಸಿಬ್ಬಂದಿ ಸ್ಥಳೀಯ ಅಂಗಡಿ ಮಾಲೀಕರಿಂದ ಖರೀದಿಸಿದ ಸಾಮಗ್ರಿಗಳ ಹಣ ನೀಡದೆ ಕಣ್ಮರೆಯಾಗಿದ್ದಾರೆಂದು ಧರಣಿ ನಿರತ ಸಿಬ್ಬಂದಿ ದೂರಿದರು.

    ವೇತನವಿಲ್ಲದೆ ನಾವು ಕಷ್ಟಕ್ಕೆ ಸಿಲುಕಿದ್ದು, ವೇತನಕ್ಕಾಗಿ ಗುತ್ತಿಗೆದಾರರಿಗೆ ಕರೆ ಮಾಡಿದರೆ ಗುತ್ತಿಗೆದಾರರ ಕರೆ ಸ್ಥಗಿತಗೊಳಿಸಿಕೊಳ್ಳುತ್ತಾರೆ ಎಂದು ಥರಣಿ ನಿರತ ಸಿಬ್ಬಂದಿ ದೂರಿದ್ದು ,ಬಾಕಿ ವೇತನ ನೀಡುವವರೆಗೂ ಧರಣಿ ನಡೆಸುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.

    ಕೊರಟಗೆರೆ ಇಂದಿರಾ ಕ್ಯಾಂಟೀನ್ ನಲ್ಲಿ 8 ಮಂದಿ ಸಿಬ್ಬಂದಿ ಕೆಲಸ ಮಾಡ ಬೇಕಾಗಿದ್ದು, ಆದರೆ ಗುತಿಗೆದಾರರು ಕೇವಲ 4 ಮಂದಿಯನ್ನು ನೇಮಕ ಮಾಡಿಕೊಂಡಿದ್ದಾರೆ. 8 ಮಂದಿ ಸಿಬ್ಬಂದಿಗಳ ಕೆಲಸ ಕೇವಲ 8ಮಂದಿ ಮಾಡುತ್ತಿದ್ದು ಕಳೆದ 5  ವರ್ಷಗಳಿಂದ  ಇದೇ ರೀತಿ ನಡೆಯುತ್ತಿದೆ. ಪ್ರತಿ ತಿಂಗಳು ಸರ್ಕಾರದಿಂದ 8 ಮಂದಿ ಸಿಬ್ಬಂದಿಗೆ ವೇತನ ಬಿಲ್ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದು ಈ ಬಗ್ಗೆ ಜಿಲ್ಲಾಧಿಕಾರಿಗಳು ಗಮನ ಹರಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

    ತಹಶೀಲ್ದಾರ್ ನಹೀದ ಜಂ ಜಂ ಮಾತನಾಡಿ,  ವಿಷಯ ತಿಳಿದ ತಕ್ಷಣ ನಾನು ಖುದ್ದು ಭೇಟಿ ನೀಡಿ ಎಲ್ಲವನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದು, ಕಾಂಟ್ರಾಕ್ಟರ್ ನಿಖಿಲ್ ರವರಿಗೆ ದೂರವಾಣಿ ಮೂಲಕ ಕರೆ ಮಾಡಿ ಒಂದು ವಾರದೊಳಗೆ ಸಿಬ್ಬಂದಿಗಳಿಗೆ ವೇತನವನ್ನು ನೀಡಬೇಕೆಂದು ತಿಳಿಸಿದ್ದೇನೆ. ಇನ್ನು ಮುಂದೆ ಇಂದಿರಾ ಕ್ಯಾಂಟೀನ್ ಗೆ ಬರುವ ಪ್ರತಿಯೊಬ್ಬರಿಗೂ ಗುಣಮಟ್ಟದ ಆಹಾರವನ್ನು ನೀಡಬೇಕೆಂದು ತಿಳಿಸಿದ್ದೇನೆ ಮತ್ತು ಕಂಟ್ರಾಕ್ಟರ್ ನಿಖಿಲ್ ಗೆ  ನೋಟಿಸ್ ನೀಡುವಂತೆ ಈಗಾಗಲೇ ಆದೇಶಿಸಿದ್ದೇನೆ ಎಂದು ತಿಳಿಸಿದರು.

    ದಲಿತ ಮುಖಂಡ ಜೆಟ್ಟಿ ಅಗ್ರಹಾರ ನಾಗರಾಜು ಮಾತನಾಡಿ, ತಾಲೂಕಿನ ಬಡ ಜನತೆಯ ಹಸಿವು ನೀಗಿಸುತ್ತಿದ್ದ ಇಂಧಿರಾ ಕ್ಯಾಂಟೀನ್ ಗೆ ಗುತ್ತಿಗೆದಾರ ಸಮರ್ಪಕವಾಗಿ ಆಹಾರ ಸಾಮಗ್ರಿಗಳನ್ನು ಸರಬರಾಜು ಮಾಡದೆ ಹಾಗೂ ಸಿಬ್ಬಂದಿಗೆ ವೇತನ ನೀಡದೆ ಪ.ಪಂ.ಯಿಂದ ಸಂಪೂರ್ಣ ಬಿಲ್ ಪಡೆದಿದ್ದು, ಸಂಬಂದಿಸಿದ ಅಧಿಕಾರಿಗಳು ತಕ್ಷಣ ಗುತ್ತಿಗೆದಾರರ ಮೇಲೆ ಕ್ರಮ ಕೈಗೊಂಡು ಸಿಬ್ಬಂದಿಗೆ ವೇತನ ಕೊಡಿಸಬೇಕು. ಮತ್ತು ಕ್ಯಾಂಟೀನ್ ಪ್ರಾರಂಭಿಸುವಂತೆ ಅವರು ಆಗ್ರಹಿಸಿದರಲ್ಲದೇ ಗುತ್ತಿಗೆದಾರ ಮಾತಿಗೆ ತಪ್ಪಿದರೆ ಸಿಬ್ಬಂದಿಯೊಂದಿಗೆ ಉಗ್ರಹೋರಾಟ ಮಾಡುವುದಾಗಿ ಎಚ್ಚರಿಸಿದರು.

    ಪ.ಪಂ.ಅಧ್ಯಕ್ಷೆ ಕಾವ್ಯರಮೇಶ್ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿ, ಪಟ್ಟಣ ಪಂಚಾಯಿತಿ ವತಿಯಿಂದ ಗುತ್ತಿಗೆದಾರರಿಗೆ ಯಾವುದೇ ಬಿಲ್ ಬಾಕಿ ಇಲ್ಲ. ಇಂದಿರಾ ಕ್ಯಾಂಟೀನ್ ನಿಂದ ಸಾರ್ವಜನಿಕರಿಗೆ ತೋಂದರೆಯಾಗಬಾರುದು ಎಂಬ ದೃಷ್ಟಿಯಿಂದ ಕಾಲ ಕಾಲಕ್ಕೆ ಸರಿಯಾಗಿ ಬಿಲ್ ಪಾವತಿಸಲಾಗಿದೆ. ಸಿಬ್ಬಂದಿಗೆ ವೇತನ ನೀಡಿಲ್ಲ ಎಂಬ ವಿಷಯ ತಿಳಿದು ಗುತ್ತಿಗೆದಾರರಿಗೆ ದೂರವಾಣಿ ಮಾಡಿದರೆ ಗುತ್ತಿಗೆದಾರ ದೂರವಾಣಿ ಸ್ವೀಕರಿಸುತ್ತಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವರದಿ ಮಾಡಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ತಿಳಿಸಿದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026

    ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ

    August 6, 2026

    ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ

    July 29, 2026

    Comments are closed.

    Our Picks

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಇಬ್ಬರು ಯುವಕರನ್ನು “ನೀವು ಭಯೋತ್ಪಾದಕರಾ?” ಎಂದು ಪ್ರಚೋದನಾತ್ಮಕವಾಗಿ ಪ್ರಶ್ನಿಸಿ, ಬೇಸ್‌ಬಾಲ್ ಬ್ಯಾಟ್‌ ನಿಂದ…

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026

    KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು

    August 9, 2026

    ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.