ಮಂಗಳೂರಿನ ಪ್ರತಿಷ್ಠಿತ ಪಿಯು ಕಾಲೇಜಿನ ಹಾಸ್ಟೆಲ್‌ನಿಂದ ಪರಾರಿಯಾಗಿದ್ದು, ಇದೀಗ ಎಲ್ಲಾ ಮೂವರು ವಿದ್ಯಾರ್ಥಿನಿಯರು ಪತ್ತೆಯಾಗಿದ್ದಾರೆ. ತಮಿಳುನಾಡಿನ ಚೆನ್ನೈನಲ್ಲಿ ಪತ್ತೆ ಹಚ್ಚಲಾಗಿದೆ.ಸೆಪ್ಟೆಂಬರ್ 21ರಂದು ಬೆಳಗಿನ ಜಾವ 3 ಗಂಟೆ ವೇಳೆಗೆ ಹಾಸ್ಟೆಲ್ ನಿಂದ ಈ ವಿದ್ಯಾರ್ಥಿಗಳು ಪರಾರಿಯಾಗಿದ್ದರು. ವಿದ್ಯಾರ್ಥಿಗಳು ಕಿಟಕಿಯ ಸಲಾಕೆಯನ್ನು ಮುರಿದು ಹೊರ ಹೋಗಿದ್ದರು. ಹೊರ ಹೋಗುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು.ಆ ದೃಶ್ಯದಿಂದ ಸಣ್ಣ ಸುಳಿವು ಸಿಕ್ಕಿತ್ತು. ಮೊದಲು ಕೊಯಮತ್ತೂರಿನತ್ತ ಹೋಗಿದ್ದರು ಎನ್ನುವ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು.
ಬೆಂಗಳೂರು ಮೂಲದ ಯಶಸ್ವಿನಿ, ದಕ್ಷತಾ ಹಾಗೂ ಚಿಕ್ಕಮಗಳೂರಿನ ಸಿಂಚನಾ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು. ಇತ್ತೀಚೆಗೆ ನಡೆದ ಪ್ರಥಮ ಪಿಯುಸಿಯ ಯುನಿಟ್ ಪರೀಕ್ಷೆಯೊಂದರಲ್ಲಿ ಕಡಿಮೆ ಅಂಕ ಪಡೆದಿದ್ದರು. ಇದರಿಂದ ಮನೆಯವರಿಗೆ ಯಾವ ರೀತಿ ಉತ್ತರಿಸುವುದು ಎಂದು ತಿಳಿಯದೆ ಪರಾರಿಯಾಗಲು ನಿರ್ಧರಿಸಿದ್ದರು.
ಮೂವರಲ್ಲಿ ಓರ್ವ ವಿದ್ಯಾರ್ಥಿನಿಯ ಸಂಬಂಧಿಕರು ಚೆನ್ನೈನಲ್ಲಿ ಇರುವುದರಿಂದ ಇವರು ರೈಲಿನಲ್ಲಿ ಚೆನ್ನೈಗೆ ಪ್ರಯಾಣ ಬೆಳೆಸಿದ್ದಾರೆ. ಆದರೆ ಚೆನ್ನೈಗೆ ಹೋದ ಬಳಿಕ ಅವರಿಗೆ ಮನೆಯವರು ಆತಂಕಗೊಂಡಿರಬಹುದು ಎಂಬುದು ಅರಿವಾಗಿದೆ. ಅಲ್ಲೇ ಸುತ್ತಾಡಿ ರಿಕ್ಷಾದಲ್ಲಿ ಚೆನ್ನೈ ಪೊಲೀಸ್ ಠಾಣೆಗೆ ಹೋಗಿದ್ದಾರೆ. ಪೊಲೀಸರಿಗೆ ನಡೆದ ವಿಚಾರ ತಿಳಿಸಿದ್ದು, ಅವರು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು.`ನಾವು ಹೋಗುತ್ತಿದ್ದೇವೆ, ಕ್ಷಮಿಸಿ’ ಎಂದು ಪತ್ರ ಬರೆದಿಟ್ಟು ಹೋಗಿದ್ದರು ಕಂಕನಾಡಿ ಠಾಣಾ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿದ್ದರು.ಆ ವಿದ್ಯಾರ್ಥಿನಿಯರನ್ನು ಚೆನ್ನೈನಿಂದ ಮಂಗಳೂರಿಗೆ ಕರೆ ತರಲಾಗುತ್ತಿದೆ. ಇದರೊಂದಿಗೆ ನಾಪತ್ತೆ ಪ್ರಕರಣವು ಸುಖಾಂತ್ಯ ಕಂಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy