ಬೆಳಗಾವಿ: ಪಿಎಫ್‌ಐ ಮುಖಂಡರ ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ್ದ ಏಳು ಮಂದಿ ಪಿಎಫ್‌ಐ ಮುಖಂಡರನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪಿಎಫ್‌ಐ ಮಾಜಿ ಜಿಲ್ಲಾಧ್ಯಕ್ಷ ಜಖೀವುಲ್ಲಾ ಫೈಜಿ ಸೇರಿ ಏಳು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅದರಲ್ಲಿ ಓರ್ವನಿಗೆ ಅನಾರೋಗ್ಯ ಹಿನ್ನೆಲೆ ವಶಕ್ಕೆ ಪಡೆಯದೇ ಕೇವಲ ವಿಚಾರಣೆ ನಡೆಸಿದ್ದಾರೆ.
ಎಸ್‌ಡಿಪಿಐ, ಪಿಎಫ್‌ಐ ಸಂಘಟನೆ ಜೊತೆಗೆ ಗುರುತಿಸಿಕೊಂಡಿದ್ದ 7 ಜನರನ್ನು ಪಡೆದಿದ್ದು, ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಹೆಚ್ಚಿನ ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ
ಮಹಾನಗರ ಪೊಲೀಸ್ ಉಪ ಆಯುಕ್ತ (ಡಿಸಿಪಿ) ರವೀಂದ್ರ ಗಡಾದಿ ನೇತೃತ್ವದ ತಂಡ ಇಂದು ಬೆಳ್ಳಂಬೆಳಗ್ಗೆ 4 ಗಂಟೆಗೆ ಪಿಎಫ್‌ಐ ಮುಖಂಡರ ಮನೆ ಮೇಲೆ ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


