ಬೆಳಗಾವಿ: ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದಿದ್ದು, ಚೂರಿ ಇರಿತದಿಂದ ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಕ್ಯಾಂಪ್ ಪ್ರದೇಶದಲ್ಲಿ ನಡೆದಿದೆ.
ಕ್ಯಾಂಪ್ ಪ್ರದೇಶದ ನಿವಾಸಿ ಫರಾನ್ ಧಾರವಾಡಕರ (15) ಗಾಯಾಳು. ಈತ ಇಸ್ಲಾಮಿಯಾ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದು, ತನ್ನಿಬ್ಬರು ಸ್ನೇಹಿತರ ಜತೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಂಬಾಭವಾನಿ ಮಂದಿರದ ಬಳಿ ಫರಾನ್ ಮೇಲೆ ಯುವಕರ ಗುಂಪು ದಾಳಿ ಮಾಡಿದೆ.
ಈ ವೇಳೆ ನಡೆದ ಜಗಳದಲ್ಲಿ ಫರಾನ್‌ಗೆ ಚೂರಿಯಿಂದ ಇರಿಯುತ್ತಿದ್ದಂತೆ ಸ್ನೇಹಿತರಿಬ್ಬರು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಗಾಯಗೊಂಡಿರುವ ಬಾಲಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


